Breaking News

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ.!

Spread the love

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರಿಂದ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ.!

ಗೋಕಾಕ: ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವ್ರದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
೨೫ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, ೨೫ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷಿö್ಮÃದೇವಿ ಸಭಾ ಭವನ ಹಾಗೂ ೧.೨೪ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು.
ಕುಂದರಗಿ ಗ್ರಾಪಂ ಸದಸ್ಯ ಶಿವಾನಂದ ತೋಟಗಿ ಮಾತನಾಡಿ, ಶಾಸಕ ರಮೇಶ ಜಾರಕಿಹೊಳಿ ಅವರು ಕುಂದರಗಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಜನರ ಸಹಕಾರ ಅಗತ್ಯವಾಗಿದ್ದು, ಈ ದೀಸೆಯಲ್ಲಿ ಕುಂದರಗಿ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ಕುಂದರಗಿ ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರಿಂದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಅವರನ್ನು ಆತ್ಮೀಯವಾಗಿ ಸತ್ಕರಿಸಿದರು.
ಕುಂದರಗಿ ಗ್ರಾಪಂ ಅಧ್ಯಕ್ಷೆ ಅರಬವ್ವ ಹರಿಜನ, ಉಪಾಧ್ಯಕ್ಷೆ ಯಮನವ್ವ ಪೂಜೇರಿ, ಮಾಜಿ ಜಿಪಂ ಸದಸ್ಯ ರಾಮಣ್ಣ ಸುಂಬಳಿ, ಉತ್ತಮ ನಾಡಗೌಡ್ರ, ಶಿವಾನಂದ ತೋಟಗಿ, ಉತ್ತಮ ದಂಡಿನ, ನಾಗಪ್ಪ ತಳವಾರ, ಅಲ್ಲಾಸಾಬ ಮುಲ್ಲಾ, ದೊಡ್ಡಪ್ಪ ನಾಯ್ಕ, ಪರಶುರಾಮ ಗೋಡಿ, ಬೋರಪ್ಪ ತಳವಾರ, ಬೆಣಚಿನಮರ್ಡಿ(ಉ) ಗ್ರಾಪಂ ಅಧ್ಯಕ್ಷ ಗಂಗಾಧರ ಪಾಟೀಲ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆನಂದ ಅತ್ತುಗೋಳ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.!

Spread the loveಅಂಜಲಿ ಹತ್ಯೆ ಪ್ರಕರಣ ಖಂಡಿಸಿ ಆರೋಪಿಗೆ ಕಠೀಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಗೋಕಾಕನಲ್ಲಿ ಪ್ರತಿಭಟನೆ.! ಗೋಕಾಕ: ಹುಬ್ಬಳ್ಳಿಯಲ್ಲಿ …

Leave a Reply

Your email address will not be published. Required fields are marked *

one × 3 =