Breaking News

ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ

Spread the love

ಗೋಕಾಕ : ಉಚಿತ ಆರೋಗ್ಯ ತಪಾಸಣೆ ಶಿಬಿರ

ಯುವ ಭಾರತ ಸುದ್ದಿ ಗೋಕಾಕ :
ಬದಲಾದ ಜೀವನಶೈಲಿ ಮತ್ತು ಒತ್ತಡದ ಬದುಕಿನ ಇಂದಿನ ದಿನಗಳಲ್ಲಿ ಜನರಲ್ಲಿ ಆರೋಗ್ಯ ಸಮಸ್ಯೆ ಹೆಚ್ಚುತ್ತಿದೆ. ಇದರ ನಿವಾರಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿ ಎಂದು ರಹೆಮಾನ ಫೌಂಡೇಶನ್ ನ ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲಾಸಾಬ ರಹಮಾನಿ ಕೊಣ್ಣೂರ ಹೇಳಿದರು.
ರವಿವಾರದಂದು ನಗರದ ಲಕ್ಕಡಗಲ್ಲಿಯ ಅಹಮದ ಶಾ ಶಾದಿ ಮಹಲ್ ನಲ್ಲಿ ರಹಮಾನ ಫೌಂಡೇಶನ್ ನ ನೋಮಾನಿಯಾ ಆಸ್ಪತ್ರೆ ಅವರ ಹಮ್ಮಿಕೊಂಡ ಉಚಿತ ಆರೋಗ್ಯ ತಪಾಸಣಾ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಸಂಘ, ಸಂಸ್ಥೆಗಳ ಪಾತ್ರದೊಡ್ಡದಾಗಿದೆ. ಗ್ರಾಮೀಣ ಭಾಗದ ಹಾಗೂ ನಗರ ಪ್ರದೇಶದ ಬಡ ಜನರಿಗೆ ಇಂತಹ ಉಚಿತ ಶಿಬಿರಗಳ ಮೂಲಕ ಚಿಕಿತ್ಸೆಗೆ ಳಪಡಿಸಿದಾಗ ಮಾತ್ರ ಅವರನ್ನು ಸಂಕಷ್ಟ ದಿಂದ ಪಾರು ಮಾಡಲು ಸಾಧ್ಯ. ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಇಂತಹ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಬಡ ಜನತೆ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ತಜ್ಞ ವೈದ್ಯರು ಲಭ್ಯವಿದ್ದಾಗ ಶಿಬಿರದಲ್ಲಿ ಪಾಲ್ಗೊಂಡು ಉಚಿತ ಆರೋಗ್ಯ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು ಕಾಯಿಲೆ ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ, ಗುಳಿಗೆ ಮುಂತಾದ ಕಷ್ಟಗಳಿಂದ ಪಾರಾಗಬಹುದು. ಹಳ್ಳಿಗಳಲ್ಲೂ ಜನರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.
ಬಡವರು ಸೇರಿದಂತೆ ಎಲ್ಲಾ ಸ್ಥರದ ಜನರಿಗೆ ಹಮ್ಮಿಕೊಂಡ ಈ ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಕಣ್ಣಿನ ಶಸ್ತ್ರಚಿಕಿತ್ಸೆ, ಸ್ತ್ರೀರೋಗ ಮತ್ತು ಮಧುಮೇಹ, ಕಣ್ಣಿನ ತಪಾಸಣೆ,ರಕ್ತದೊತ್ತಡ, ಇಸಿಜಿ, ಮೂಳೆರೋಗ, ನರರೋಗ, ಕ್ಯಾನ್ಸರನಂಥ ಮಾರಕ ಖಾಯಿಲೆಗಳು ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಈ ಸಂದರ್ಭದಲ್ಲಿ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಯಿತು. ಶಿಬಿರದಲ್ಲಿ ಐದನೂರಕ್ಕೂ ಹೆಚ್ಚು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು.
ಶಿಬಿರದಲ್ಲಿ ಡಾ.ಅಫ್ರಾನ ಗಲಗಲಿ, ಡಾ.ಗುಲ್ಫಶಾ ಖಾನಂ ಜಮಾದರ , ಡಾ.ತೌಸೀಫ ದೇವಾಲೆ, ಡಾ.ಜಾವೇದ್ ಜಗದಾಳ, ಡಾ ಸಮೀರ ಶೇಖ್ , ಡಾ.ಅತಿಕುರ ರಹೆಮಾನ ಗುತ್ತಿ, ಡಾ.ರೂಪಾಲಿ ಜೌಗಲೆ, ಡಾ. ಎನ್.ಡಿ.ಕಮತನೂರ, ಡಾ. ಅಬ್ದುಲ್ ರಶೀದ ಭಾಗವಹಿಸಿ ಚಿಕಿತ್ಸೆ ನೀಡಿದರು.
ವೇದಿಕೆಯಲ್ಲಿ ರಹೆಮಾನ ಪೌಂಡೇಶನ್ ನ ಗೋಕಾಕ ತಾಲೂಕು ಮುಖ್ಯಸ್ಥ ಹಾಜಿ ಸಲಿಮ ಅಮ್ಮಣಗಿ, ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ಕೆ.ಎಂ ಗೋಕಾಕ, ಅಂಜುಮನ್ ಕಮಿಟಿ ಅಧ್ಯಕ್ಷ ಜಾವೇದ ಗೋಕಾಕ ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

2 × 3 =