Breaking News

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್

Spread the love

ಮೂಡುಬಿದಿರೆ ಅಂತರಾಷ್ಟ್ರೀಯ ಜಾಂಬೂರಿಗೆ ತೆರಳಿದ ಗೋಕಾಕ ಸ್ಕೌಟ್ಸ್, ಗೈಡ್ಸ್

ಯುವ ಭಾರತ ಸುದ್ದಿ ಗೋಕಾಕ :
ಕ್ಷೇತ್ರದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಸರ್ವಾಂಗೀಣ ಅಭಿವೃದ್ಧಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಬಿಇಒ ಜಿ.ಬಿ.ಬಳಗಾರ ಹೇಳಿದರು

ಗುರುವಾರದಂದು ನಗರದ ಸಮುದಾಯ ಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಇವರುಗಳು ಹಮ್ಮಿಕೊಂಡ ಮೂಡಬಿದಿರಿಯಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ತೆರಳುತ್ತಿರುವ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳಿಗೆ ಬಿಳ್ಕೋಡುವ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ ಸ್ಕೌಟ್ಸ್ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲಿ ಪಾಲ್ಗೊಂಡು ರಾಜ್ಯ,ರಾಷ್ಟ್ರ ಮಟ್ಟದಲ್ಲಿ ಪ್ರತಿಭಾವಂತರಾಗಲು ಶಾಸಕರು ಹಲವಾರು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ೩೫೮ ಸ್ಕೌಟ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವೈಯಕ್ತಿಕವಾಗಿ ಜಾಂಬೂರಿ ಕಾರ್ಯಕ್ರಮದಲ್ಲಿ ಪಾಲ್ಗೋಳ್ಳಲು ಬಸ್ಸುಗಳ ಸೌಕರ್ಯ ಕಲ್ಪಿಸಿದ್ದಾರೆ. ಈ ಸೌಲಭ್ಯಗಳ ಸದುಪಯೋಗದಿಂದ ವಿದ್ಯಾರ್ಥಿಗಳು ಸಾಧಕರಾಗಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ಕರೆ ನೀಡಿದರು.

ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ ನೀಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ಆಯುಕ್ತ ಡಿ.ಬಿ.ಅತ್ತಾರ, ತಾಲೂಕು ಕಾರ್ಯದರ್ಶಿ ಲಗಮಣ್ಣ ಲಗಮಪ್ಪಗೋಳ, ದೈಹಿಕ ಶಿಕ್ಷಣಾಧಿಕಾರಿ ಎ.ಕೆ ತೋರಣಗಟ್ಟಿ ರಾಮಚಂದ್ರ ಕಾಕಡೆ ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

9 + eight =