Breaking News

SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ

Spread the love

SSLC ವಿದ್ಯಾರ್ಥಿಗಳಿಗೆ ಶುಭ ಸುದ್ದಿ

ಯುವ ಭಾರತ ಸುದ್ದಿ ಬೆಂಗಳೂರು :
ಈ ಬಾರಿಯೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಇದೇ 31 ರಿಂದ ಎಸ್‌ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ತಯಾರಿಗಳನ್ನು ಪೂರ್ಣಗೊಳಿಸಿರುವುದಾಗಿ SSLC ಬೋರ್ಡ್ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ.

ಇದರ ಜೊತೆಗೆ ಈ ಬಾರಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಂಡಳಿ ಗುಡ್ ನ್ಯೂಸ್ ನೀಡಿದೆ. ಕೊರೊನಾ ಬ್ಯಾಚ್ ಎಂದು ಪರಿಗಣಿಸಿ ಶೇ.10% ರಷ್ಟು ಗ್ರೇಸ್ ಅಂಕ ನೀಡುವುದಾಗಿ ಬೋರ್ಡ್ ತಿಳಿಸಿದೆ.

ಮೂರು ವಿಷಯಗಳಿಗೆ ಮಾತ್ರ ಗ್ರೇಸ್ ಮಾರ್ಕ್‌ ಅಂಕ ನೀಡಲು ಬೋರ್ಡ್ ‌ಮುಂದಾಗಿದೆ. ಭಾಷಾ ಹಾಗೂ ಕೋರ್ ವಿಷಯಗಳಿಗೆ ಮಾತ್ರ ಗ್ರೇಸ್ ಅಂಕ ಕೊಡಲಾಗುತ್ತದೆ. ತೇರ್ಗಡೆ ಕಡಿಮೆ ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಇದು ಅನ್ವಯವಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ಕಳೆದ ಎರಡು ವರುಷದಿಂದ ಕೊರೊನಾ ಕಾರಣಕ್ಕೆ ಶೇ.10 ರಷ್ಟು ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು.ಅದನ್ನು ಈ ವರ್ಷವೂ ಮುಂದುವರಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 8, 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ತೇರ್ಗಡೆ ಹೊಂದಿದ ಕಾರಣ ಈ ವರ್ಷವೂ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡಲು ಬೋರ್ಡ್ ನಿರ್ಧಾರ ತೆಗೆದುಕೊಂಡಿದೆ.

SSLC ಪರೀಕ್ಷಾ ಕಾರ್ಯ ಪೂರ್ಣ ಗೊಳಿಸಿದ ಬೋರ್ಡ್:
ಮಾರ್ಚ್ 31 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಪ್ರಾರಂಭವಾಗುತ್ತಿದೆ. ಮಾ. 31ರಿಂದ ಏ. 15ರ ವರೆಗೆ ಈ ಭಾರಿ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 8.42 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಂದು ಎಸ್.ಎಸ್.ಎಲ್.ಸಿ ಬೋರ್ಡ್ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ.

ರಾಜ್ಯಾದ್ಯಂತ ಒಟ್ಟು 3305 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಬಾರಿ ಚುನಾವಣೆ ಇರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲು ಜಿಲ್ಲಾಧಿಕಾರಿ, ಜಿಲ್ಲಾ ಎಸ್ಪಿಗೆ ಮೊದಲೇ ಸೂಚನೆ ಕೊಡಲಾಗಿದೆ ಎಂದು ಪರೀಕ್ಷಾ ಮಂಡಳಿ ನಿರ್ದೇಶಕ ರಾಮಚಂದ್ರ ಹೇಳಿದ್ದಾರೆ. ಪರೀಕ್ಷಾ ಅಕ್ರಮ ತಡೆಯಲು ಕಟ್ಟುನಿಟ್ಟಾಗಿ ಕ್ರಮ‌ ಕೈಗೊಳ್ಳಲಾಗಿದ್ದು

ಊಹಾಪೋಹಗಳಿಗೆ ಪೋಷಕರು ಹಾಗೂ ವಿದ್ಯಾರ್ಥಿಗಳು ಕಿವಿಕೊಡದಂತೆ ಬೋರ್ಡ್ ‌ಮನವಿ ಮಾಡಿಕೊಂಡಿದೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

16 + six =