ಕಾಂಗ್ರೆಸ್‌ಗೆ ಗುಡ್ ಬೈ, ಬಿಜೆಪಿಗೆ ಸೇರ್ಪಡೆಯಾದ ಆಕಾಂಕ್ಷಿ !

ಹುಬ್ಬಳ್ಳಿ:
ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡದ ಕಾರಣಕ್ಕೆ ಅಸಮಾಧಾನಗೊಂಡ ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು, ಸಚಿವ ಗೋವಿಂದ ಕಾರಜೋಳ ಸಮ್ಮುಖದಲ್ಲಿ ಅವರು ಭಾನುವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ನಾಗರಾಜ್ ಛಬ್ಬಿ ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಸಂತೋಷ ಲಾಡ್ ಅವರಿಗೆ ಟಿಕೆಟ್ ನೀಡಿದ್ದರಿಂದ ಬೇಸತ್ತು ಕೆಪಿಸಿಸಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು.
ರಾಜ್ಯ ವಿಧಾನ ಸಭಾ ಚುನಾವಣೆಗೆ ಕೇವಲ ಒಂದು ತಿಂಗಳಷ್ಟೇ ಬಾಕಿ ಇದೆ. ಆರು ತಿಂಗಳ ಹಿಂದೆಯೇ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಸಂತೋಷ್ ಲಾಡ್ ಮತ್ತು ನಾಗರಾಜ ಛಬ್ಬಿ ನಡುವೆ ಭಾರೀ ಪೈಪೋಟ್ ನಡೆದಿತ್ತು. ಕೊನೆಗೆ ಸಂತೋಷ ಲಾಡ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.
YuvaBharataha Latest Kannada News