Breaking News

ಮತ್ತೆ ಡಿಸಿಎಂ ಆದ ಮಹಾ ನಾಯಕ

Spread the love

ಮತ್ತೆ ಡಿಸಿಎಂ ಆದ ಮಹಾ ನಾಯಕ

ಮುಂಬೈ:

ನೆರೆಯ ಮಹಾರಾಷ್ಟ್ರದಲ್ಲಿ ರಾಜಕೀಯ ಪಲ್ಲಟ ಸಂಭವಿಸಿದೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತೆ
ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಶಿವಸೇನೆ ಹಾಗೂ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಈ ಬೆಳವಣಿಗೆ ದೇಶದ ರಾಜಕೀಯ ರಂಗದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.

ಮಹಾರಾಷ್ಟ್ರ ಜನರಿಗೆ ನ್ಯಾಷನಲಿಷ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಬಹುದೊಡ್ಡ ಶಾಕ್ ಕೊಟ್ಟಿದ್ದಾರೆ.

ಭಾನುವಾರ ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದೆ. ಇದರಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರ ಸಮ್ಮಿಶ್ರ ಸರ್ಕಾರಕ್ಕೆ ತಮ್ಮ ಜೊತೆಯಿರುವ 10ಕ್ಕೂ ಹೆಚ್ಚು ಶಾಸಕರ ಜೊತೆ ಬೆಂಬಲ ನೀಡಿರುವ ಅಜಿತ್ ಪವಾರ್, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಅಜಿತ್ ಪವಾರ್ ಜೊತೆ ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹಾಗೂ ದಿಲೀಪ್ ವಾಲ್ಸೆ, ಧನಂಜಯ್ ಮುಂಡೆ, ಹಸನ್ ಮುಶ್ರಿಫ್, ಧರ್ಮ್‌ರಾವ್ ಬಾಬಾ, ಆದಿತಿ ತಟಕಾರೆ, ಅನಿಲ್ ಪಾಟೀಲ, ಸಂಜಯ್ ಬನ್ಸೊಡೆ ಸೇರಿ 9 ಎನ್‌ಸಿಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಅವರು ಪ್ರಮಾಣವಚನ ಭೋದಿಸಿದರು.

ಅಜಿತ್ ಪವಾರ್ ಈ ಹಿಂದೆ ಸಹ ಬಂಡಾಯವೆದ್ದು ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದರು. ನಂತರ ಮತ್ತೆ ಎನ್ ಸಿ ಪಿ ಗೆ ಮರಳಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

17 + sixteen =