ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮೂಹ ವಿಮೆ: ಕುಲಸಚಿವೆ ರಾಜಶ್ರೀ ಜೈನಾಪುರ
ಯುವ ಭಾರತ ಸುದ್ದಿ ಬೆಳಗಾವಿ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ವಿಶ್ವವಿದ್ಯಾಲಯವು 2022-23ನೇ ಶೈಕ್ಷಣಿಕ ಸಾಲಿಗೆ ಎಲ್ಲ ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ರೂ. 1,83,04,710/-ಗಳ ವೆಚ್ಚದಲ್ಲಿ ಸಮೂಹ ವಿಮೆಯನ್ನು ವಿದ್ಯಾರ್ಥಿಗಳ ಅಧ್ಯಯನ ಮತ್ತು ಭವಿಷ್ಯತ್ತಿನ ಜವಾಬ್ದಾರಿಗಾಗಿ ಮಾಡಿರುತ್ತದೆ.
ವಿದ್ಯಾರ್ಥಿ/ವಿದ್ಯಾರ್ಥಿನಿಯರು ಮತ್ತು ವಿದ್ಯಾರ್ಥಿಗಳ ಪಾಲಕರು ಈ ಸಮೂಹ ವಿಮೆಯ (ಅವಶ್ಯಕತೆಯಿದ್ದ ಪಕ್ಷದಲ್ಲಿ) ಲಾಭವನ್ನು ಪಡೆಯುವ ನಿಟ್ಟಿನಲ್ಲಿ ಮಹಾವಿದ್ಯಾಲಯಗಳ ಪ್ರಾಚಾರ್ಯರು ಎಲ್ಲ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವಂತೆ ಈ ಮೂಲಕ ತಿಳಿಸಲಾಗಿದೆ.
ಕುಲಪತಿಗಳ ಸದುದ್ದೇಶ ಮತ್ತು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಾಮಾಜಿಕ ಹೊಣೆಗಾರಿಕೆಯ ಭಾಗವಾಗಿ ವಿಮೆಯನ್ನು ಜಾರಿಗೊಳಿಸಲಾಗಿದೆ. ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಚಾರ್ಯರು ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಈ ಬಗ್ಗೆ ಜಾಗೃತಿ ಮೂಡಿಸಬೇಕು.
ಈ ವಿಷಯದ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯದ ಸಮೂಹ ವಿಮೆಯ ನೋಡಲ್ ಅಧಿಕಾರಿ ಡಾ. ಶ್ರೀನಿವಾಸ ಹಡಾಡಿ (ಮೊಬೈಲ್ ಸಂಖ್ಯೆ-8147981201) ಅವರನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ವಿಶ್ವವಿದ್ಯಾಲಯದ ಕುಲಸಚಿವೆ ರಾಜಶ್ರೀ ಜೈನಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.