Breaking News

ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ

Spread the love

ಬೆಳಗಾವಿ ಆರ್.ಎಲ್.ಕಾನೂನು ಕಾಲೇಜಿನಲ್ಲಿ ಗುರುಪೂರ್ಣಿಮೆ ಆಚರಣೆ

ಬೆಳಗಾವಿ :
ಕೆಎಲ್‌ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಎಂ.ಕೆ.ನಂಬಿಯಾರ್ ಮೂಟ್ ಕೋರ್ಟ್ ಸಭಾಂಗಣದಲ್ಲಿ ಸೋಮವಾರ ಗುರುಪೂರ್ಣಿಮೆ ಆಚರಿಸಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಜಿ.ಎಸ್.ಎಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಕ್ಷಯ ಕುಲಕರ್ಣಿ ಆಗಮಿಸಿ, ವಿದ್ಯಾರ್ಥಿಗಳಿಗೆ ಗುರುಪೂರ್ಣಿಮಾ ಆಚರಣೆ ಕುರಿತು ಮಾಹಿತಿ ನೀಡಿ, ಭಾರತದಲ್ಲಿ ಮಹರ್ಷಿ ವ್ಯಾಸರ ಜನ್ಮದಿನದ ಸವಿನೆನಪಿಗಾಗಿ ಗುರುಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಇದು ನಮ್ಮ ಸಮಾಜದಲ್ಲಿ ಗುರುಗಳಿಗೆ ನೀಡುವ ಗೌರವ. ಶಿಕ್ಷಣ ವ್ಯವಸ್ಥೆಯು ಹೇಗೆ ವಿಕಸನಗೊಂಡಿತು ಮತ್ತು ನಮ್ಮ ಶಿಕ್ಷಣ ವ್ಯವಸ್ಥೆ ಹೇಗೆ ಸ್ವಾಯತ್ತವಾಗಿದೆ. ನಮ್ಮ ಇಂದಿನ ಶಿಕ್ಷಣ ವ್ಯವಸ್ಥೆಯು ಹೇಗೆ ಸಾಗುತ್ತಿದೆ ಎಂಬ ಬಗ್ಗೆ ವಿವರಿಸಿದರು.

ನ್ಯಾಯವಾದಿ ಹಾಗೂ ಚೇರ್ಮನ್ ಐಎಂಇಆರ್ ಕಾಲೇಜು ಚೇರಮನ್ ಆರ್.ಎಸ್.ಮುತಾಲಿಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಗುರುವಿನ ಪ್ರಾಮುಖ್ಯತೆಯ ಬಗ್ಗೆ ವಿವರಿಸಿ, ಆರ್.ಎಲ್.ಕಾಲೇಜು ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸಾಧನೆಗಳನ್ನು ಅವರು ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ.ಎ.ಎಚ್.ಹವಾಲ್ದಾರ್ ಗುರುವಿನ ಮಹತ್ವ ಕುರಿತು ಮಾತನಾಡಿ ಸಮಾಜದಲ್ಲಿ ಗುರುವಿನ ಪ್ರಾಮುಖ್ಯತೆಯನ್ನು ತಿಳಿಸಿದರು.

ಆರ್.ಎಲ್.ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಡಾ.ಪ್ರಸನ್ನಕುಮಾರ್ ಡಿ., ಡಾ.ಸಬೀನಾ ಬೇಗ್ ಅವರು ತಮ್ಮ ಶಿಕ್ಷಕರನ್ನು ಸ್ಮರಿಸಿದರು. ಸ್ನೇಹಾ ಕುಲಕರ್ಣಿ ಪ್ರಾರ್ಥಿಸಿದರು. ಪವನ್ ಶಿರೋಳ್ ಸ್ವಾಗತಿಸಿದರು. ಕೇದಾರ ಘೋಡ್ಸೆ ಕಾರ್ಯಕ್ರಮ ನಿರೂಪಿಸಿದರು. ಸತೀಶ ವಂದಿಸಿದರು.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

4 × 2 =