Breaking News

ಕೈ ಟಿಕೆಟ್ ಘೋಷಣೆ : ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಅರವಿಂದ ದಳವಾಯಿ, ಮಹಾವೀರ ಮೋಹಿತೆ, ಆಸೀಫ್ ಸೇಠ್​, ಪ್ರಭಾವತಿಗೆ ಅವಕಾಶ

Spread the love

ಕೈ ಟಿಕೆಟ್ ಘೋಷಣೆ : ಬೆಳಗಾವಿ ಜಿಲ್ಲೆಯಲ್ಲಿ ಲಕ್ಷ್ಮಣ ಸವದಿ, ಅರವಿಂದ ದಳವಾಯಿ, ಮಹಾವೀರ ಮೋಹಿತೆ, ಆಸೀಫ್ ಸೇಠ್​, ಪ್ರಭಾವತಿಗೆ ಅವಕಾಶ

ಯುವ ಭಾರತ ಸುದ್ದಿ ಬೆಂಗಳೂರು :                   ರಾಜ್ಯ ವಿಧಾನಸಭಾ ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.

ಚುನಾವಣಾ ತಯಾರಿಯಲ್ಲಿರುವ ಕಾಂಗ್ರೆಸ್ ಈಗಾಗಲೇ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ 43 ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಾರೆ ಎನ್ನಲಾಗಿದ್ದ ಕೋಲಾರದಿಂದ ಡಿ.ಕೆ. ಶಿವಕುಮಾರ ಅವರ ಆಪ್ತ ಕೊತ್ತೂರು ಮಂಜುನಾಥ ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಜೆಡಿಎಸ್ ತೊರೆದು ‘ಕೈ’ ಹಿಡಿದಿದ್ದ ಶಿವಲಿಂಗೇಗೌಡ ಅವರಿಗೆ ಅರಸೀಕೆರೆ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಬೆಳಗಾವಿ ಉತ್ತರ ಕ್ಷೇತ್ರದಿಂದ ಆಸೀಫ್‌ ಸೇಠ್ ಅವರಿಗೆ ಟಿಕೆಟ್ ನೀಡಲಾಗಿದೆ.
ಮೂರನೇ ಪಟ್ಟಿ
ಅಥಣಿ-ಲಕ್ಷ್ಮಣ್‌ ಸವದಿ
ಅರಭಾವಿ-ಅರವಿಂದ ದಳವಾಯಿ
ರಾಯಬಾಗ ಕ್ಷೇತ್ರ-ಮಹಾವೀರ ಮೋಹಿತೆ
ಬೆಳಗಾವಿ ಉತ್ತರ ಕ್ಷೇತ್ರ-ಆಸೀಫ್ ಸೇಠ್​
ಬೆಳಗಾವಿ ದಕ್ಷಿಣ ಕ್ಷೇತ್ರ- ಪ್ರಭಾವತಿ ಮಾಸ್ತಮರಡಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

19 + three =