ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ

ಬೆಂಗಳೂರು :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಹೇಮಂತ ನಿಂಬಾಳಕರ್ ದಶಕಗಳ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಅವರ ಧರ್ಮಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರ ಮತಕ್ಷೇತ್ರದ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿಯಾಗಿದ್ದಾರೆ.
YuvaBharataha Latest Kannada News