Breaking News

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್

Spread the love

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್

ಬೆಂಗಳೂರು:
ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಈಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು ₹59,000 ಕೋಟಿ ವಾರ್ಷಿಕ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಈಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ.
ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ.
– ಮುಖ್ಯಮಂತ್ರಿ…

— CM of Karnataka (@CMofKarnataka) June 6, 2023
ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಅವರು ಹೇಳಿದ್ದಾರೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು.

ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು. ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

20 − thirteen =