Breaking News

ಭಾರೀ ಸಂಚಲನ : ತೆರೆ ಮೇಲೆ ಬರುತ್ತಾ ಕಾಂತಾರ-2

Spread the love

ಭಾರೀ ಸಂಚಲನ : ತೆರೆ ಮೇಲೆ ಬರುತ್ತಾ ಕಾಂತಾರ-2

ಬೆಂಗಳೂರು :
ನಟ , ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸ್ಕ್ರಿಪ್ಟ್ ಅನ್ನು ಬಹುತೇಕ ಮುಗಿಸಿದ್ದಾರೆ. ಕಾಂತಾರ ಚಿತ್ರಕ್ಕೆ ಮಾತುಗಳನ್ನೂ ಹೆಣೆದಿರುವ ಅವರು ಸ್ಕ್ರಿಪ್ಟ್ ಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ ಎನ್ನುವ ಮಾಹಿತಿ ಇದೀಗ ಹೊರ ಬಿದ್ದಿದೆ.

 

ಇದರ ಜೊತೆ ಜೊತೆಗೆ ಶೂಟಿಂಗ್ ಸ್ಥಳಗಳನ್ನೂ ಅವರು ಹುಡುಕುತ್ತಿದ್ದು, ಈ ಎಲ್ಲವನ್ನೂ ಮುಗಿಸಿಕೊಂಡು ಆಗಸ್ಟ್ ನಲ್ಲಿ ಚಿತ್ರಕ್ಕೆ ಮುಹೂರ್ತ ಮಾಡಲಿದ್ದಾರೆ ಎನ್ನುವುದು ಅವರ ತಂಡದಿಂದ ಸಿಕ್ಕಿರುವ ಮಾಹಿತಿ ಇದೆ. ಕಾಂತಾರ ಸಿನಿಮಾದ ಮುಹೂರ್ತ ಕಳೆದ ಬಾರಿ ಯಾವ ದೇವಸ್ಥಾನದಲ್ಲಿ ಆಗಿತ್ತೋ , ಮತ್ತೆ ಅದೇ ದೇವಸ್ಥಾನದಲ್ಲೇ ಕಾಂತಾರ ಪ್ರಿಕ್ವೆಲ್ ಮುಹೂರ್ತ ಆಗಲಿದೆಯಂತೆ. ಆನೆಗುಡಿ ಗಣಪತಿ ದೇವಸ್ಥಾನದಲ್ಲೇ ಮುಹೂರ್ತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆಗಸ್ಟ್ 27 ರಂದು ಕಾಂತಾರ ಪ್ರಕ್ವೆಲ್ ಗೆ ಮಹೂರ್ತ ನಿಗದಿಯಾಗಿದೆಯಂತೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

19 + fifteen =