ಮುಖ್ಯಮಂತ್ರಿ ನಾನೇ ಆಗುವೆ !

ಯುವ ಭಾರತ ಸುದ್ದಿ ಬಾಗಲಕೋಟೆ :
ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ತಮ್ಮ ಮನದಾಸೆ ವ್ಯಕ್ತಪಡಿಸಿದ್ದಾರೆ. ಮುಧೋಳದಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಮತ್ತೆ ನಾನೇ ಮುಖ್ಯಮಂತ್ರಿಯಾಗುತ್ತೇನೆ. ಆಗ ವಿವಿಧ ಕ್ಷೇತ್ರಗಳಿಗೆ ಮತ್ತೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ಪಕ್ಷ ತೀರ್ಮಾನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿತ್ರದುರ್ಗದಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬೊಮ್ಮಾಯಿ ಅವರು ಈ ರೀತಿ ಹೇಳಿರುವುದು ಬಿಜೆಪಿಯಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಬಿಜೆಪಿ ವರಿಷ್ಠರು ಈಗಾಗಲೇ ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ ಎಂದು ಘೋಷಿಸಿದ್ದಾರೆ.
YuvaBharataha Latest Kannada News