ಇಂದೇ ದೆಹಲಿಗೆ ಹೋಗುತ್ತೇನೆ, ಸೋನಿಯಾ ಭೇಟಿಯೇ ಮೊದಲ ಆದ್ಯತೆ : ಡಿ.ಕೆ. ಶಿವಕುಮಾರ

ಯುವ ಭಾರತ ಸುದ್ದಿ ಬೆಂಗಳೂರು :
ಮುಖ್ಯಮಂತ್ರಿ ಸ್ಥಾನಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಮಧ್ಯೆ ತೀವ್ರ ಸ್ಪರ್ಧೆ ಏರ್ಪಟ್ಟಿದ್ದು, ಈಗ ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಆಯ್ಕೆ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಆಪ್ತ ಶಾಸಕರು ದೆಹಲಿಗೆ ತಲುಪಿದ್ದಾರೆ. ಈ ನಡುವೆ ಡಿ.ಕೆ. ಶಿವಕುಮಾರ ಅವರು ಮಂಗಳವಾರ (ಮೇ 16) ಬೆಳಿಗ್ಗೆ ದೆಹಲಿಗೆ ತರೆಳುವುದಾಗಿ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೋಮವಾರ ಸಂಜೆ ದೆಹಲಿಗೆ ಹೋಗಬೇಕಾಗಿತ್ತು. ಆದರೆ, ಆರೋಗ್ಯ ಸರಿ ಇರಲಿಲ್ಲ, ಅದಕ್ಕೆ ಹೋಗಲು ಆಗಿಲ್ಲ, ಈಗ ಆರೋಗ್ಯ ಸುಧಾರಣೆ ಆಗಿದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.
ಮಂಗಳವಾರ ಬೆಳಿಗ್ಗೆ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಏನು ಬೆಳವಣಿಗೆ ಆಗುತ್ತಿದೆ ಎನ್ನುವುದು ನನಗೆ ಗೊತ್ತಿಲ್ಲ, ಮಂಗಳವಾರವೇ ಸೋನಿಯಾ ಗಾಂಧಿ ಅವರು ಶಿಮ್ಲಾದಿಂದ ಆಗಮಿಸಲಿದ್ದಾರೆ. ಸೋನಿಯಾ ಗಾಂಧಿ ಅವರನ್ನ ಭೇಟಿಯಾಗವುದೇ ನನ್ನ ಮೊದಲ ಆದ್ಯತೆ, ಸೋನಿಯಾ ಗಾಂಧಿ ಅವರು ಬರಲಿ ಎಂದು ಕಾಯುತ್ತಿದ್ದೇನೆ ಎಂದು ಶಿವಕುಮಾರ ಹೇಳಿದರು.
ಈ ಮಧ್ಯೆ ದೆಹಲಿಯಲ್ಲಿ ಶಿವಕುಮಾರ ಅವರ ಸಹೋದರ ಡಿ.ಕೆ. ಸುರೇಶ ಮಾಡಿತನಾಡಿ, ಮಂಗಳವಾರ ಸಂಜೆ ಡಿ. ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಅವರ ಜೊತೆಗೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಚರ್ಚೆ ನಡೆಸುತ್ತಾರೆ ಎಂದು ಹೇಳಿದ್ದಾರೆ.
YuvaBharataha Latest Kannada News