Breaking News

ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ !

Spread the love

ಮಹತ್ವದ ಬೆಳವಣಿಗೆ : ಮತ್ತೆ ದೆಹಲಿಗೆ ತೆರಳಿದ ಗೋಕಾಕ್ ಸಾಹುಕಾರ್ !

ಯುವ ಭಾರತ ಸುದ್ದಿ ದೆಹಲಿ :
ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಸಚಿವ ಹಾಗೂ ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ವಾರದ ಅವಧಿಯಲ್ಲೇ ಮತ್ತೊಮ್ಮೆ ದೆಹಲಿಗೆ ತೆರಳಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದ್ದ ರಮೇಶ್ ಜಾರಕಿಹೊಳಿಯವರು ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೆಲ ಮಹತ್ವದ ದಾಖಲೆಗಳನ್ನು ಸಲ್ಲಿಸಿದ್ದರು. ಇದೀಗ ರಮೇಶ್ ಜಾರಕಿಹೊಳಿಯವರು ತಮ್ಮ ಬೆಂಬಲಿಗರಾದ ಕಿರಣ್ ಜಾಧವ್ ಮತ್ತು ನಾಗೇಶ್ ಮನ್ನೊಳ್ಕರ್ ಅವರ ಜೊತೆ ದೆಹಲಿಗೆ ತೆರಳಿದಿರುವುದು ಕರ್ನಾಟಕ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನಕ್ಕೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ಹತ್ತಿರವಾದಂತೆ ರಮೇಶ್ ಜಾರಕಿಹೊಳಿ ಅವರು ಇದೀಗ ಡಿ.ಕೆ.ಶಿವಕುಮಾರ್ ಅವರು ವಿರುದ್ಧ ಪ್ರಬಲ ಅಸ್ತ್ರ ಪ್ರಯೋಗಿಸುತ್ತಿರುವುದು ಮುಂದಿನ ದಿನಗಳಲ್ಲಿ ಕರ್ನಾಟಕ ರಾಜಕೀಯದಲ್ಲಿ ಬಾರಿ ಸಂಚಲನ ಮೂಡಿಸುವುದರಲ್ಲಿ ಯಾವುದೇ ಸಂದೇಹವಿಲ್ಲ.

ಒಟ್ಟಾರೆ ಇದೀಗ ಮತ್ತೊಮ್ಮೆ ಅವರು ತಮ್ಮ ಬೆಂಬಲಿಗರ ಜೊತೆ ದೆಹಲಿಗೆ ಭೇಟಿ ನೀಡಿರುವುದು ಬಾರಿ ಕುತೂಹಲಕ್ಕೆ ಕಾರಣವಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

two × 1 =