Breaking News

ಹಿರೇಬಾಗೇವಾಡಿಯಲ್ಲಿ ವಿರೋಧಿಗಳ ವಿರುದ್ದ ಮತ್ತೆ ರಣಕಹಳೆ ಮೊಳಗಿಸಿದ ಸಾಹುಕಾರ್ !

Spread the love

ಹಿರೇಬಾಗೇವಾಡಿಯಲ್ಲಿ ವಿರೋಧಿಗಳ ವಿರುದ್ದ ಮತ್ತೆ ರಣಕಹಳೆ ಮೊಳಗಿಸಿದ ಸಾಹುಕಾರ್ !

ಯುವ ಭಾರತ ಸುದ್ದಿ ಬೆಳಗಾವಿ :
ಮಾಜಿ ಸಚಿವ ಹಾಗೂ ಗೋಕಾಕ ಹಾಲಿ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರು ಮತ್ತೆ ತಮ್ಮ ವಿರೋಧಿಗಳ ವಿರುದ್ಧ ರಣಕಹಳೆ ಮೊಳಗಿಳಿಸಿದ್ದಾರೆ. ಗುರುವಾರ ಸಂಜೆ ಹಿರೇಬಾಗೇವಾಡಿಯಲ್ಲಿ ರಮೇಶ ಜಾರಕಿಹೊಳಿ ಅಭಿಮಾನಿಗಳ ಬಳಗದವರು ಏರ್ಪಡಿಸಿದ್ದ ಅಭಿಮಾನದ ಸಮಾವೇಶ ಉದ್ದೇಶಿಸಿ ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು.

ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ
ಹಿಂಡಲಗಾ, ಸುಳೇಭಾವಿ ನಂತರ ಇದೀಗ ಹಿರೇಬಾಗೇವಾಡಿಯಲ್ಲಿ ರಮೇಶ ಜಾರಕಿಹೊಳಿ ಅವರ ಅಭಿಮಾನಿಗಳು ಅಭಿಮಾನದ ಸಮಾವೇಶ ನಡೆಸಿದ್ದಾರೆ. ಇಂದಿನ ಸಭೆಯಲ್ಲೂ ಭಾರಿ ಸಂಖ್ಯೆಯಲ್ಲಿ ಜನ ಭಾಗವಹಿಸಿ ಗಮನ ಸೆಳೆದರು.

ಸಭೆಯಲ್ಲಿ ಮಾತನಾಡಿದ ವಿವಿಧ ನಾಯಕರು ರಮೇಶ ಜಾರಕಿಹೊಳಿ ಅವರು ಸೂಚಿಸುವ ಅಭ್ಯರ್ಥಿಯ ಗೆಲುವಿಗೆ ಪಣತೊಡುವುದಾಗಿ ವಾಗ್ದಾನ ನೀಡಿದರು. ಬೆಳಗಾವಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಹಿರೇಬಾಗೇವಾಡಿ ಸಿದ್ದನಭಾವಿಕೆರೆ ಅಭಿವೃದ್ಧಿ ಹಾಗೂ ಹಲಗಿ ಮರಡಿ ಬಳಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ನಿರ್ಮಾಣಕ್ಕೆ ರಮೇಶ ಜಾರಕಿಹೊಳಿ ಅವರೇ ನೇರ ಕಾರಣ ಎಂದು ಅನೇಕರು ಅವರ ಕಾರ್ಯವೈಖರಿ ಬಗ್ಗೆ ಅಭಿಮಾನ ಸೂಚಿಸಿದರು.

ರಮೇಶ್ ಜಾರಕಿಹೊಳಿ ಮಾತನಾಡಿದ್ದೇನು ?
ಸುಳೇಬಾವಿ ಹಾಗೂ ಹಿಂಡಲಗಾದಲ್ಲಿ ನಡೆದ
ಎರಡು ಸಮಾವೇಶದಲ್ಲಿ ನಾನು ಮಾತನಾಡಿರುವೆ. ಆ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ನನ್ನ ವಿರುದ್ಧ ರಾಜ್ಯಮಟ್ಟದಲ್ಲಿ ವಾಗ್ದಾಳಿ ನಡೆಸಿದರು. ನನ್ನ ಮೇಲೆ ದೂರು ಸಹ ದಾಖಲು ಮಾಡಿದರು.

ಕಾಂಗ್ರೆಸ್ ಪಕ್ಷ ಇಂದು ತೀರಾ ಕೆಳಮಟ್ಟಕ್ಕೆ ಇಳಿದಿದೆ. ನಾನು ಬಹಳ ಕಳಪೆ ಮಟ್ಟದ ಭಾಷಣಕ್ಕೆ ಹೋಗುವುದಿಲ್ಲ. ಆದರೆ ಅವರಿಗೆ ಉತ್ತರ ಕೊಡಲೇಬೇಕಾಗಿದೆ. ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದ ಶಾಸಕರ ಬಗ್ಗೆ ವೈಯಕ್ತಿಕವಾಗಿ ನಾನು ಮಾತನಾಡಲಾರೆ. ರಸ್ತೆ ಅಭಿವೃದ್ಧಿ ಮಾತ್ರ ಕ್ಷೇತ್ರದ ಅಭಿವೃದ್ಧಿ ಕೆಲಸವಲ್ಲ. ಪ್ರತಿ ವರ್ಷ ಶಾಸಕರ ಅನುದಾನ ಬರುತ್ತದೆ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಯಾವುದೇ ಶಾಸಕರು ಇರಲಿ. ಸರಕಾರ ಅನುದಾನ ಬಿಡುಗಡೆಗೊಳಿಸುತ್ತದೆ. ಈ ನಿಟ್ಟಿನಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ ಸಹ ಸರಕಾರ ಅನುದಾನ ಬಿಡುಗಡೆ ಮಾಡಿದೆ.
ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಅಭಿವೃದ್ಧಿಪರ ಕೆಲಸಗಳಿಗೆ ನಾನು ಎಂದಿಗೂ ಅಡ್ಡಿ ಮಾಡಿಲ್ಲ ಎಂದು ಹೇಳಿದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾವು ಈ ಕ್ಷೇತ್ರವನ್ನು ಗೆಲ್ಲಲೇ ಬೇಕಾಗಿದೆ. ಬಿಜೆಪಿಯ ವರಿಷ್ಠರು ಬೆಳಗಾವಿ ಗ್ರಾಮೀಣಕ್ಕೆ ಅತ್ಯುತ್ತಮ ಅಭ್ಯರ್ಥಿಯನ್ನು ನೀಡಬೇಕು. ನಾವು ಇಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಪಣತೊಡೋಣ ಎಂದು ಹೇಳಿದರು.

ಮಹಾ ನಾಯಕರು ಇರಲಿ ಅಥವಾ ಸ್ಥಳೀಯ ಶಾಸಕರ ಇರಲಿ. ಎಷ್ಟು ಕೆಳಮಟ್ಟದ ರಾಜಕಾರಣ ಮಾಡುತ್ತಾರೆ. ಬೆಳಗಾವಿ ಗ್ರಾಮೀಣ ಶಾಸಕರನ್ನು ವೀರರಾಣಿ ಚೆನ್ನಮ್ಮಳಿಗೆ ಹೋಲಿಸುವುದು ಎಂತಹ ದುರ್ದೈವ. ಈ ಮೂಲಕ ಚೆನ್ನಮ್ಮಳಿಗೆ ಅಪಮಾನ ಮಾಡುವುದು ಸಹಿಸುವುದಿಲ್ಲ. ಈ ಅಮ್ಮನಿಗೆ ಕನಿಷ್ಠ ಜ್ಞಾನವೂ ಸಹ ಇಲ್ಲ ಎಂದು ಪರೋಕ್ಷವಾಗಿ ಬೆಳಗಾವಿ ಗ್ರಾಮೀಣ ಶಾಸಕರ ವಿರುದ್ಧ ಕಿಡಿಕಾರಿದರು.

ಶಾಸಕರ ಸ್ಥಾನಕ್ಕೆ ನಾವು ಗೌರವ ಕೊಡೋಣ.
ಆದರೆ ಅವರು ರಾಜ್ಯ ಸರ್ಕಾರದ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಎಂಬಂತೆ ನಡೆಸಲು ಬಿಡೆವು ಎಂದು ತಿಳಿಸಿದರು.
ಈ ಚುನಾವಣೆಯಲ್ಲಿ ನಾವು ಗೆಲ್ಲಲೇ ಬೇಕು. ಇಲ್ಲವಾದರೆ ನಿಮ್ಮ ಜಮೀನುಗಳೆಲ್ಲ ಹೋಗುತ್ತದೆ. ಬೆಂಗಳೂರು ಸುತ್ತಮುತ್ತ ಅವರ ಬಾಸ್ ಇದ್ದಾರಲ್ಲ. ಹೇಗೆ ಅತಿಕ್ರಮಣ ಮಾಡಿಕೊಂಡಿದ್ದರೋ ಶಾಸಕರ ಸಂಬಂಧಿಗಳು ಸಹ ಬಂದರೂ ನಿಮ್ಮ ಹೊಲವನ್ನು ಬಿಡಬೇಕಾಗುತ್ತದೆ. ನೀವು ಯಾವುದೇ ಆಮಿಷಕ್ಕೂ ಈ ಬಾರಿ ಬಲಿಯಾಗಬೇಡಿ ಎಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಮತದಾರರಲ್ಲಿ ಅವರು ಮನವಿ ಮಾಡಿಕೊಂಡರು.

ರಾಜ್ಯಕ್ಕೆ ಒಳ್ಳೆದಾಗಬೇಕಾದರೆ ಹಾಗೂ ಬೆಳಗಾವಿ ಗ್ರಾಮೀಣ ಶಾಸಕಿ ಈ ಬಾರಿ ಸೋಲಲೇ ಬೇಕಾಗಿದೆ. ಉಚಗಾವಿಯಲ್ಲಿ ಮತ್ತೊಂದು ಸಮಾವೇಶ ನಡೆಸುತ್ತೇವೆ. ನಂತರ ಬಿಜೆಪಿ ವತಿಯಿಂದ ಪಕ್ಷದ ಸಮಾವೇಶ ಮಾಡುತ್ತೇವೆ. ಪಕ್ಷ ಸೂಚಿಸಿದ ಉತ್ತಮ ಅಭ್ಯರ್ಥಿಯನ್ನು ಈ ಬಾರಿ ಗೆಲ್ಲಿಸೋಣ ಎಂದು ಅವರು ಮನವಿ ಮಾಡಿದರು.

ಕಳೆದ ನಾಲ್ಕು ವರ್ಷಗಳಿಂದ ಇಲ್ಲಿ ಬಿಜೆಪಿ ಸಂಘಟನೆ ಕುಂಠಿತವಾಗಿತ್ತು. ಆದರೆ ಮೂರ್ನಾಲ್ಕು ತಿಂಗಳಿನಿಂದ ಬಿಜೆಪಿ ಸಂಘಟನೆ ಬಲಿಷ್ಠವಾಗಿದೆ. ನಾವು ಅತ್ಯಂತ ಸಮರ್ಥ್ಯವಾಗಿ ಕೆಲಸ ಮಾಡೋಣ. ರಾಜ್ಯದಲ್ಲಿ ಮಾದರಿಯಾಗಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸೋಣ ಎಂದು ಅವರು ಮನವಿ ಮಾಡಿದರು.

ಹಿಂಡಲಗಾ ಗ್ರಾಮ ಪಂಚಾಯತಿ ಅದ್ಯಕ್ಷ ನಾಗೇಶ ಮನ್ನೊಳಕರ,
ಜಿಪಂ ಸದಸ್ಯ ಶಂಕರಗೌಡ ಪಾಟೀಲ,, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ, ಸುಳೇಭಾವಿ ಜಿಪಂ ಸದಸ್ಯೆ ಲಕ್ಷ್ಮೀ ಪಾರ್ವತಿ, ಹಲಗಾ ಜಿಪಂ ಸದಸ್ಯ ನಾಗರಾಜ ಪಾಟೀಲ. ಬಿಜೆಪಿ ಧುರೀಣರಾದ ರಾಮಚಂದ್ರ ಮನ್ನೋಳಕರ, ಬಡಸ ತಾಪಂ ಸದಸ್ಯ ಮಹಾಂತೇಶ ಅಲಾಬದಿ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರಮೇಶ ಸರವದೆ, ಮಾಜಿ‌ ಜಿಪಂ ಅದ್ಯಕ್ಷ ಉಳವಪ್ಪ ನಂದಿ, ನಿರ್ದೇಶಕ ಪ್ರಶಾಂತ ದೇಸಾಯಿ, ಹಿರೇ ಬಾಗೇವಾಡಿ ಎಪಿಎಂಸಿ ಮಾಜಿ ಅಧ್ಯಕ್ಷೆ ರೇಣುಕಾ ಪಡಿಗೌಡ ಪಾಟೀಲ, ಬೆಳಗಾವಿ ಟಿ,ಎ,ಪಿ,ಸಿ,ಎಮ್,ಎಸ್,ಉಪಾಧ್ಯಕ್ಷ ಶಿವನಗೌಡ ಪಾಟೀಲ ಉಪಸ್ಥಿತರಿದ್ದರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

ten − 6 =