Breaking News

ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ

Spread the love

ಲಕ್ಷ್ಮಣರಾವ್ ಜಾರಕಿಹೊಳಿ ಪಾಲಿಟೆಕ್ನಿಕ್ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನೆ

ಯುವ ಭಾರತ ಸುದ್ದಿ ಗೋಕಾಕ :
ಪಠ್ಯದಷ್ಟೆ ಪಠ್ಯೇತರ ಚುಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳೆಯವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಇಲ್ಲಿನ ಸರಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಖಿಲಾರಿ ಹೇಳಿದರು.
ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪಾಲಿಟೆಕ್ನಿಕ್ ನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೋಳುವದರಿಂದ ಸದೃಢ ಆರೋಗ್ಯವಂತರಾಗಿ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುತ್ತದೆ. ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ವೇದಿಕೆಗಳ ಮೂಲಕ ಪ್ರದರ್ಶಸಿಸುವ ಮುಖೇನ ಪ್ರೋತ್ಸಾಹಿಸಿಕೊಳ್ಳಿ. ಶಿಕ್ಷಣದೊಂದಿಗೆ ಉತ್ತಮ ಹವ್ಯಾಸಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಪರಿಪೂರ್ಣ ವ್ಯಕ್ತಿಗಳಾಗುತ್ತಿರಿ ವಿದ್ಯೆ ಜೀವನದ ದಾರಿದೀಪವಾಗಿದ್ದು, ಅದನ್ನು ಕಲ್ಪಿಸಿದ ಪಾಲಕರು, ಸಂಸ್ಥೆ ಹಾಗೂ ಶಿಕ್ಷಕರನ್ನು ಸದಾ ಸ್ಮರಿಸಿಕೊಳ್ಳುವಂತೆ ಕರೆ ನೀಡಿದರು.

ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಆಡಳಿತಾಧಿಕಾರಿ ಬಿ.ಕೆ ಕುಲಕರ್ಣಿ, ಪ್ರಾಚಾರ್ಯ ಎಚ್.ಎಸ್.ಅಡಿಬಡ್ಡಿ ಉಪನ್ಯಾಸಕ ಪಿ.ಡಿ.ಪಂಚಾಳ, ಅಶ್ವಿನಿ ಮುನ್ನವಳ್ಳಿ ನಿರೂಪಿಸಿದರು, ಉಪನ್ಯಾಸಕಿ ಎಸ್.ಎಂ ಪಭನೂರಿ ಸ್ವಾಗತಿಸಿದರು, ಎಸ್.ಬಿ.ಕುಲಿಗೋಡ ವಂದಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 × 4 =