Breaking News

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ

Spread the love

ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳ ಪದಗ್ರಹಣ 13 ರಂದು : ನಿರ್ಮಲಾ ತಳಕೇರಿ

ಯುವ ಭಾರತ ಸುದ್ದಿ ಇಂಡಿ :
ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಕಾಂಗ್ರೆಸ್ ಕಾರ್ಯಾಲಯದಲ್ಲಿ ಇಂಡಿ ಹಾಗೂ ಬಳ್ಳೊಳ್ಳಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಹಿಳಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜ.13 ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಇಂಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ನಿರ್ಮಲಾ ತಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಸಕ ಯಶವಂತರಾಯಗೌಡ ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮಕ್ಕೆ ,ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ ವಿದ್ಯಾರಾಣಿ ತುಂಗಳ,ಇಂಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೀದ ಮೋಮಿನ,ಯುವ ಘಟಕದ ಅಧ್ಯಕ್ಷ ಅವಿನಾಶ ಬಗಲಿ,ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಲಿಯಾಸ ಬೊರಾಮಣಿ ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು,ಕಾರ್ಯಕರ್ತರು,ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು,ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.


Spread the love

About Yuva Bharatha

Check Also

ಮತ್ತೆ ಕಂಪಿಸಿದ ಭೂಮಿ

Spread the loveಮತ್ತೆ ಕಂಪಿಸಿದ ಭೂಮಿ ಯುವ ಭಾರತ ಸುದ್ದಿ ವಿಜಯಪುರ : ತಿಕೋಟಾ ಪಟ್ಟಣ ಸೇರಿ ಸುತ್ತಲಿನ ಪ್ರದೇಶಗಳಲ್ಲಿ …

Leave a Reply

Your email address will not be published. Required fields are marked *

twelve − 9 =