Breaking News

ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸವರಾಜ ಮುರಗೋಡ

Spread the love

ಸರಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ : ಬಸವರಾಜ ಮುರಗೋಡ

ಯುವ ಭಾರತ ಸುದ್ದಿ ಗೋಕಾಕ :
ಮಾರ್ಚ್ ೧ ರಿಂದ ಸರ್ಕಾರಿ ನೌಕರರು ತಮ್ಮ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಮುರಗೋಡ ತಿಳಿಸಿದ್ದಾರೆ.
ಸೋಮವಾರದಂದು ನಗರದ ತಾಲೂಕು ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಾದ ವೇತನ ಪರಿಷ್ಕರಣೆಗೆ ಸಂಬAಧಿಸಿದ ಮಧ್ಯಂತರ ವರದಿಯನ್ನು ೭ನೇ ವೇತನ ಆಯೋಗ ಜಾರಿ ಹಾಗೂ ಎನ್​ಪಿಎಸ್​ ರದ್ದುಪಡಿಸಿ, ಒಪಿಎಸ್ ಯೋಜನೆಯನ್ನು ಜಾರಿ ಮಾಡಬೇಕೆಂಬ ಬೇಡಿಕೆಯನ್ನಿಟ್ಟುಕೊಂಡ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿರುವುದಾಗಿ ತಿಳಿಸಿದ ಅವರು ರಾಜ್ಯ ಸರ್ಕಾರಿ ನೌಕರರ ನ್ಯಾಯಯುತವಾದ ಬೇಡಿಕೆಗಳಾದ ವೇತನ ಭತ್ಯೆ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಸಂಬಂಧ ಫೆಬ್ರವರಿ ೨೧ ರಂದು ನಡೆದ ರಾಜ್ಯ ಕಾರ್ಯಕಾರಿಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ತಾಲೂಕಿನ ಸಮಸ್ತ – ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದರು.
ನಮ್ಮ ರಾಜ್ಯದ ಸರ್ಕಾರಿ ನೌಕರರು ಇತರೆ ರಾಜ್ಯಗಳಿಗಿಂತ ಕಡಿಮೆ ಸಂಬಳದಲ್ಲಿ ದುಡಿಯುತ್ತಿದ್ದಾರೆ. ೭ನೇ ವೇತನ ಆಯೋಗದ ವರದಿಯಂತೆ ನಮ್ಮ ವೇತನ ಶೇ ೪೦ ರಷ್ಟು ಹೆಚ್ಚಿಸಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್​ಘಡ್, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ರೀತಿಯಲ್ಲಿ ನಮ್ಮಲ್ಲೂ ಸಹ ಒಪಿಎಸ್ ಜಾರಿ ಮಾಡಬೇಕು ಎಂಬ ಬೇಡಿಕೆ ಇದೆ.ನಮ್ಮ ನೌಕರರ ಸಂಘದವರು ಯಾರು ಸಹ ಧಿಕ್ಕಾರ ಕೂಗಲ್ಲ, ಪ್ರತಿಭಟನೆ ಮಾಡಲ್ಲ ನಮ್ಮ ಹಾಗೂ ಕುಟುಂಬದ ಭವಿಷ್ಯದ ದೃಷ್ಟಿಯಿಂದ ನಾವು ಕರ್ತವ್ಯಕ್ಕೆ ಗೈರಾಗುತ್ತಿದ್ದೇವೆ ಎಂದು ಹೇಳಿದರು.
ನಮ್ಮ ವೇತನ ಆಯೋಗದ ಕುರಿತು ಬಜೆಟ್​ನಲ್ಲಿ ಘೋಷಣೆ ಮಾಡುವ ಕುರಿತ ನಿರೀಕ್ಷೆ ಇತ್ತು. ಆದರೆ ಅಲ್ಲಿ ಘೋಷಣೆ ಮಾಡದೆ ನಮಗೆಲ್ಲಾ ನಿರಾಸೆಯನ್ನುಂಟು ಮಾಡಲಾಗಿದೆ. ಇದರಿಂದ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ. ನಮ್ಮ ಸಂಘ ಹಾಗೂ ನೌಕರರು ಅನೇಕ ಸಂದರ್ಭದಲ್ಲಿ ಸರ್ಕಾರದ ಜೊತೆ ಇದ್ದೇವೆ. ಸರ್ಕಾರ ನಮಗೆ ಅನೇಕ ಕೆಲಸಗಳನ್ನು ಮಾಡಿಕೊಟ್ಟಿದೆ. ಆದರೆ ಇಂದು ನಮ್ಮ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರತಿಭಟನೆಗೆ ಮುಂದಾಗಿದ್ದೇವೆ. ನಾವು ಸರ್ಕಾರದ ಮಕ್ಕಳು. ಇದರಿಂದ ಇಷ್ಟು ದಿನ ಸಮಾಧಾನದಿಂದ ಕಾದು ನೋಡಿದ್ವಿ, ಈಗ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ ಎಂದು ಬಸವರಾಜ ಮುರಗೋಡ ಹೇಳಿದರು.
ಈ ಸಂದರ್ಭದಲ್ಲಿ ಬಿ.ಎಂ ಕೊಡ್ಲ್ಯಾಳ, ಅಶೋಕ ಮೇಸ್ತಿ, ಬಿ.ಎ ಮಾಲದಿನ್ನಿ, ಕೃಷ್ಣಕುಮಾರ್ ಎಸ್.ಕೆ, ಎಸ್.ಎಸ್.ಖಾನಪೇಠ, ಶ್ರೀಮತಿ ಎಂ.ವ್ಹಿ.ಬಾಗೇನ್ನವರ, ಎಸ್.ಜಿ.ದೊಡಮನಿ, ಎಂ.ಎಲ್.ಹಸರಂಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

1 × 1 =