Breaking News

ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್ : ಉಚಿತ ಸಿಲಿಂಡರ್, ಅಂಗನವಾಡಿ ನೌಕರರ ಕಾಯಂ ಉದ್ಯೋಗ

Spread the love

ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್ : ಉಚಿತ ಸಿಲಿಂಡರ್, ಅಂಗನವಾಡಿ ನೌಕರರ ಕಾಯಂ ಉದ್ಯೋಗ

ಯುವ ಭಾರತ ಸುದ್ದಿ ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.

ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಚುನಾವಣಾ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಬಿ ಎಂ ಫಾರೂಕ್, ಪಕ್ಷದ ಕಾರ್ಯಾಧ್ಯಕ್ಷ ಅಲ್ಕೋಡ್ ಹನುಮಂತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

 

ತಾನು ಅಧಿಕಾರಕ್ಕೆ ಬಂದರೆ ಮುಂದಿನ 5 ವರ್ಷಗಳಲ್ಲಿ ರಾಜ್ಯದ ಅಭಿವೃದ್ಧಿಗೆ ರೂಪಿಸಿರುವ ಅಭಿವೃದ್ಧಿ ಯೋಜನೆಗಳನ್ನು ಸವಿಸ್ತಾರವಾಗಿ ತಿಳಿಸಲಾಗಿದೆ. ಜನತಾ ಮಿತ್ರ ಎನ್ನುವ ಕಾರ್ಯಕ್ರಮದ ಮೂಲಕ ಈಗಾಗಲೇ ಜನಾಭಿಪ್ರಾಯ ಸಂಗ್ರಹಿಸಿದ್ದು, 80 ಸಾವಿರ ಜನ ಮುಂದಿನ ಸರ್ಕಾರ ಯಾವ ವಿಚಾರಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ, ಜನರ ಅಭಿಪ್ರಾಯಗಳನ್ನು ಸಂಗ್ರಹಿಸಿ, “ಕರುನಾಡ ಜನಾಭಿಪ್ರಾಯ ಆಧಾರಿತ ಜನತಾ ಸರ್ಕಾರ’ ಮಾಡುವುದೇ ನಮ್ಮ ಗುರಿ ಎಂದು ಹೇಳಿದೆ.

 

ಪಂಚರತ್ನ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವುದು ನಮ್ಮ ಗುರಿ ಎಂದು ಜೆಡಿಎಸ್ ಪ್ರಣಾಳಿಕೆಯಲ್ಲಿ ತಿಳಿಸಿದೆ. ಜನತಾ ಜಲಧಾರೆ, ಜನತಾ ಮಿತ್ರ, ಪಂಚರತ್ನ ರಥ ಯಾತ್ರೆಯ ಸಮಯದಲ್ಲಿ ಜನರಿಂದ ಸ್ವೀಕರಿಸಿದ ಸಲಹೆ, ನಿರೀಕ್ಷೆಗಳನ್ನು ಆಧರಿಸಿ ಪ್ರಣಾಳಿಕೆಯನ್ನು ಸಿದ್ದಪಡಿಸಿರುವುದಾಗಿ ಜೆಡಿಎಸ್ ತಿಳಿಸಿದೆ.

ವರ್ಷಕ್ಕೆ ಐದು ಅಡುಗೆ ಅನಿಲ ಸಿಲಿಂಡರ್ ನೀಡುವುದಾಗಿ ಜೆಡಿಎಸ್ ಘೋಷಿಸಿದೆ. ಮಾತೃಶ್ರೀ ಮತ್ತು ಗರ್ಭಿಣಿ ತಾಯಂದಿರ ಅಗತ್ಯತೆ ಪೂರೈಸಲು 6 ತಿಂಗಳ ಕಾಲ 6 ಸಾವಿರ ರುಪಾಯಿ ಭತ್ಯೆ ನೀಡುವುದಾಗಿ ಭರವಸೆ ನೀಡಿದೆ. ವಿಧವಾ ವೇತನವನ್ನು 900 ರೂಪಾಯಿಗಳಿಂದ 2,500 ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ಜೆಡಿಎಸ್ ಹೇಳಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ 11,000 ರೂ., ಸಹಾಯಕಿಯರಿಗೆ 6,500 ರೂ., ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,500 ರೂ.ಗಳ ಗೌರವಧನ ಪಾವತಿಸಲಾಗುತ್ತಿದೆ. ಈ ಕಾರ್ಯಕರ್ತರ ಸೇವೆಯನ್ನು ಖಾಯಂಗೊಳಿಸಿ, ವೇತನ ನಿಗದಿಗೊಳಿಸಿ ಪ್ರತಿ ಕಾರ್ಯಕರ್ತೆಯರಿಗೆ ಮಾಸಿಕ ಹೆಚ್ಚುವರಿಯಾಗಿ 5000 ರೂ. ವೇತನ ಪಾವತಿಸಲಾಗುವುದು. ಅದೇ ರೀತಿ ಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಕಾರ್ಯಕರ್ತೆಯರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದೆ.

ಕೈಗಾರಿಕಾ ಅಭಿವೃದ್ಧಿಗೆ ಜೆಡಿಎಸ್ ಯೋಜನೆಗಳು ಹೀಗಿವೆ.

ಶಿಕ್ಷಣ, ಆರೋಗ್ಯ, ಕೈಗಾರಿಕೆ, ನೀರಾವರಿ ವಲಯಗಳಲ್ಲೂ ಭಾರಿ ಬದಲಾವಣೆ ತರುವಂತಹ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ರೂಪಿಸಲಾಗಿದೆ. ಯುವ ಜನತೆ ಮತ್ತು ಮಹಿಳಾ ಸಬಲೀಕರಣಕ್ಕೂ ಹೆಚ್ಚಿನ ಒತ್ತು ನೀಡಲಾಗಿದೆ. ಮೇಕೆದಾಟು ಯೋಜನೆ, ಮಹದಾಯಿ ಯೋಜನೆ, ಎತ್ತಿನಹೊಳೆ ಯೋಜನೆ ಭದ್ರ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ.
ಪ್ರಮುಖವಾಗಿ ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ ರೂ. ನೀಡುತ್ತೇವೆ ಎಂಬ ಭರವಸೆ ನೀಡಿರುವ ದಳಪತಿಗಳು, ಬಿಜೆಪಿ ಸರ್ಕಾರ ರದ್ದುಪಡಿಸಿರುವ ಮುಸ್ಲಿಮರ ಶೇ.4ರಷ್ಟು ಮೀಸಲಾತಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

1 × 4 =