Breaking News

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ

Spread the love

ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಆಯ್ಕೆ

ಯುವ ಭಾರತ ಸುದ್ದಿ ಬೆಂಗಳೂರು :    ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗ ಸ್ವಾಮಿ ಹೊಳಿಮಠ ಅವರ ಹೆಸರಿನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ (ಕೆಯುಡಬ್ಲ್ಯುಜೆ) ಸ್ಥಾಪಿಸಿರುವ ವಾರ್ಷಿಕ ದತ್ತಿ ನಿಧಿ ಪ್ರಶಸ್ತಿಗೆ ಪತ್ರಕರ್ತ ಶಂಕರ ಪಾಗೋಜಿ ಅವರನ್ನು ಆಯ್ಕೆ ಮಾಡಲಾಗಿದೆ.

ಸದ್ಯ ಮುಖ್ಯಮಂತ್ರಿಯ ಮಾಧ್ಯಮ ಸಂಯೋಜಕರಾಗಿರುವ ಪಾಗೋಜಿ, ವಿವಿಧ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ವಿಜಯಪುರದಲ್ಲಿ ಫೆ.4 ಮತ್ತು 5 ರಂದು ನಡೆಯಲಿರುವ ಪತ್ರಕರ್ತರ 37 ನೇ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವಂಗತ ಗುರುಲಿಂಗ ಸ್ವಾಮಿ ಹೊಳಿಮಠ ಹೆಸರಿನ ದತ್ತಿನಿಧಿಗೆ ಚಾಲನೆ ನೀಡಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

fifteen − eight =