Breaking News

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ !

Spread the love

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ !

ಯುವ ಭಾರತ ಸುದ್ದಿ ಬೆಂಗಳೂರು:
ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವಾಗಲೇ ಬಿಜೆಪಿಯ ಹಿರಿಯ ನಾಯಕ ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ತಾನು ಸ್ವಯಂ ನಿವೃತ್ತಿ ಘೋಷಣೆ ಮಾಡುತ್ತಿದ್ದೇನೆ. ಈ ಬಾರಿಯ ಚುನಾವಣೆಯಲ್ಲಿ ಯಾವುದೇ ಕ್ಷೇತ್ರಕ್ಕೆ ನನ್ನ ಹೆಸರನ್ನು ಪರಿಗಣಸದಂತೆ ಮನವಿ ಮಾಡಿದ್ದಾರೆ.
ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ. 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಬಿಜೆಪಿಯ ಟಿಕೆಟ್‌ ಘೋಷಣೆಗೂ ಮುನ್ನವೇ ಅವರು ಚುನಾವಣಾ ರಾಜಕೀಯಕ್ಕೆ ಸ್ವತಃ ನಿವೃತ್ತಿ ಘೋಷಣೆ ಮಾಡಿರುವ ಅವರು ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಎ.ರವೀಂದ್ರನಾಥ ಅವರ ನಂತರ ಮೂರನೇ ವ್ಯಕ್ತಿಯಾಗಿದ್ದಾರೆ


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

3 + sixteen =