Breaking News

ಕನ್ನಡ ಸಾಹಿತ್ಯ ಶ್ರೀಮಂತಿಕೆಯ ಆಗರ : ಬೆಳ್ಳುಬ್ಬಿ

Spread the love

ಕನ್ನಡ ಸಾಹಿತ್ಯ ಶ್ರೀಮಂತಿಕೆಯ ಆಗರ : ಬೆಳ್ಳುಬ್ಬಿ

ಯುವ ಭಾರತ ಸುದ್ದಿ ಬಸವನಬಾಗೇವಾಡಿ :
(ಜಗದ್ಗುರು ಲಿಂ.ಡಾ.ಮಹಾಂತಲಿಂಗ ಶಿವಾಚಾರ್ಯ ಪ್ರಧಾನ ವೇದಿಕೆ.)
ಜನಪದ ಸಾಹಿತ್ಯವು ಪ್ರಾಚೀನ ಸಾಹಿತ್ಯವಾಗಿದೆ. ಕನ್ನಡ ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ. ಸಾಹಿತ್ಯದಿಂದ ಸಂಸ್ಕಾರ,ಸಂಸ್ಕ್ರತಿಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.

ಮನಗೂಳಿ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಕನ್ನಡ ಹೆಣ್ಣುಮಕ್ಕಳ ಶಾಲೆಗಳ ಆವರಣದಲ್ಲಿ ಭಾನುವಾರ ಬಸವನಬಾಗೇವಾಡಿ ತಾಲೂಕಿನ ೯ ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಹಾಗೂ ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿವಿಧ ಸಮಾರಂಭದಲ್ಲಿ ಜನಸಾಮಾನ್ಯರು ಕನ್ನಡ ಸಾಹಿತ್ಯವನ್ನು ಉಳಿಸಿಕೊಂಡು ಬಂದಿದ್ದಾರೆ. ನನ್ನ ಶಾಸಕ ಅವಧಿಯಲ್ಲಿ ಬಸವನಬಾಗೇವಾಡಿ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ, ವಿಜಯಪುರದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ನಡೆದಿರುವುದನ್ನು ಸ್ಮರಣೆ ಮಾಡಿಕೊಂಡರು.
ಇದೇ ಸಂದರ್ಭದಲ್ಲಿ ಅವರು ಬಿಜಾಪುರ ನಮ್ಮ ಬಿಜಾಪುರ—- ಎಂಬ ತಮ್ಮ ಜನಪ್ರಿಯ ಜನಪದ ಗೀತೆಯನ್ನು ಸುಶ್ರಾವ್ಯವಾಗಿ ಹಾಡಿ ಜನರನ್ನು ಮನರಂಜಿಸಿದರು.
ವೇದಿಕೆಯಲ್ಲಿ ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ, ವಡವಡಗಿಯ ವೀರಸಿದ್ದ ಸ್ವಾಮೀಜಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ತಾಲೂಕು ಕಸಾಪ ಅಧ್ಯಕ್ಷ ಶಿವರುದ್ರಯ್ಯ ಹಿರೇಮಠ, ಪೊಲೀಸ ಇಲಾಖೆಯ ಜ್ಯೋತಿರ್ಲಿಂಗ ಹೊನ್ನಾಕಟ್ಟಿ, ಜಿಪಂ ಮಾಜಿ ಅಧ್ಯಕ್ಷೆ ಅಪ್ಸರಾಬೇಗಂ ಚಪ್ಪರಬಂದ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ, ಬಿಜೆಪಿ ಮಂಡಳ ಅಧ್ಯಕ್ಷ ಶಂಕರಗೌಡ ಪಾಟೀಲ, ಶ್ರೀಶೈಲ ಹಾದಿಮನಿ ಇತರರು ಇದ್ದರು. ನಂತರ ವಿವಿಧ ಕಲಾವಿದರಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ಜನಮನಸೂರೆಗೊಂಡವು. ಸಮ್ಮೇಳನದಲ್ಲಿ ಹಿರಿಯ ನಾಗರಿಕರನ್ನು, ವಿವಿಧ ಸಾಧಕರನ್ನು, ಕಲಾವಿದರನ್ನು, ಸಾಹಿತಿಗಳನ್ನು ಸೇರಿದಂತೆ ವಿವಿಧ ಕ್ಷೇತ್ರದ ಜನರನ್ನು ಸನ್ಮಾನಿಸಲಾಯಿತು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

four × two =