Breaking News

ಮುಖ್ಯಮಂತ್ರಿ ಯಡಿಯೂರಪ್ಪ ದಿಢೀರ್‌ ರಾಜ್ಯಪಾಲ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ..!!

Spread the love

ಬೆಂಗಳೂರು: ರಾಜ್ಯ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಂಪುಟ ವಿಸ್ತರಣೆ ಸಿದ್ಧತೆಗಳು ಆರಂಭವಾಗಿವೆ ಎನ್ನಲಾಗುತ್ತಿದೆ. ಈ ನಡುವೆ ಇಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ದಿಢೀರ್‌ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

 

ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡುವ ನಿಟ್ಟಿನಲ್ಲಿಯೇ ಸಿಎಂ ಯಡಿಯೂರಪ್ಪ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ ಎನ್ನಲಾಗುತ್ತಿದೆ.

 

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಸಂಪುಟದಲ್ಲಿ ಆರು ಸಚಿವ ಸ್ಥಾನಗಳು ಖಾಲಿಯಾಗಿಯೇ ಇವೆ. ಈ ಸ್ಥಾನಕ್ಕಾಗಿ ಹಲವು ಸಚಿವರು ಪೈಪೋಟಿ ನಡೆಸಿದ್ದಾರೆ. ಆಗಸ್ಟ್‌ ತಿಂಗಳಲ್ಲಿ ಸಂಪುಟ ವಿಸ್ತರಣೆ ಮಾಡಲು ಸಿಎಂ ಮುಂದಾಗಿದ್ದು, ಹೈಕಮಾಂಡ್‌ ನಾಯಕರ ಒಪ್ಪಿಗೆ ದೊರೆತರೆ ಸಂಪುಟ ವಿಸ್ತರಣೆ ಖಚಿತ ಎನ್ನಲಾಗುತ್ತಿದೆ.

 

 


Spread the love

About Yuva Bharatha

Check Also

11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ!

Spread the love11ಕೆ.ವ್ಹಿ ಭೂಗತ ವಿದ್ಯುತ್ ವಿತರಣಾ ಮಾರ್ಗ ಕಾಮಗಾರಿಗೆ ಚಾಲನೆ-ಶಾಸಕ ರಮೇಶ ಜಾರಕಿಹೊಳಿ! ಗೋಕಾಕ: ನಗರದ ಡಾರ‍್ಸ್ ಕಾಲನಿ …

Leave a Reply

Your email address will not be published. Required fields are marked *

twenty + 18 =