ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ; ವಿಚಾರಣೆಯಿಂದ ಹಿಂದೆ ಸರಿದ ನಾಗರತ್ನ

ಯುವ ಭಾರತ ಸುದ್ದಿ ದೆಹಲಿ:
ಬೆಳಗಾವಿಯನ್ನು ಕರ್ನಾಟಕಕ್ಕೆ ಸೇರಿಸಿದ್ದನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೂಡಿರುವ ಮೂಲದಾವೆಯ ವಿಚಾರಣೆಯಿಂದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಬುಧವಾರ ಹಿಂದೆ ಸರಿದಿದ್ದಾರೆ.
ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಹೃಷಿಕೇಶ ರಾಯ್ ಹಾಗೂ ನಾಗರತ್ನ ಅವರಿದ್ದ ಪೀಠ ವಿಚಾರಣೆಯನ್ನು ಬುಧವಾರ ನಡೆಸಬೇಕಿತ್ತು. ಕರ್ನಾಟಕ ಮೂಲದವರಾದ ನಾಗರತ್ನ ಅವರು ವಿಚಾರಣೆಯಿಂದ ಹಿಂದಕ್ಕೆ ಸರಿಯುವುದಾಗಿ ಪ್ರಕಟಿಸಿದರು. ಗಡಿ ವಿವಾದದ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಅವರು ಹೊಸ ಪೀಠ ಸ್ಥಾಪಿಸಲಿದ್ದಾರೆ.
YuvaBharataha Latest Kannada News