Breaking News

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ!

Spread the love

ಅಮಿತ್ ಶಾ ಮಧ್ಯಸ್ಥಿಕೆಯಲ್ಲಿ ಇಂದು ಕರ್ನಾಟಕ- ಮಹಾರಾಷ್ಟ್ರ ಮುಖ್ಯಮಂತ್ರಿಗಳ ಸಭೆ!

ಯುವ ಭಾರತ ಸುದ್ದಿ ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಧ್ಯಸ್ಥಿಕೆಯಲ್ಲಿಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತ ಮಹತ್ವದ ಸಭೆ ದೆಹಲಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ, ಅಧಿಕಾರಿಗಳು ಈ ಮಹತ್ವದ ಸಭೆಯಲ್ಲಿ ಭಾಗವಹಿಸುವರು. ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಆದ್ದರಿಂದ ಈ ಸಭೆ ಭಾರಿ ಕುತೂಹಲ ಕೆರಳಿಸಿದೆ. ಸಂಜೆ 7 ಕ್ಕೆ ದೆಹಲಿಯಲ್ಲಿ ಈ ಸಭೆ ನಡೆಯಲಿದೆ. ಇತ್ತೀಚಿಗೆ ಮಹಾರಾಷ್ಟ್ರದ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಸುಪ್ರಿಯ ಸುಳೆ ಲೋಕಸಭೆಯಲ್ಲಿ ಗಡಿ ವಿವಾದವನ್ನು ಕೆದಕಿದ್ದರು. ಇದಕ್ಕೆ ಕರ್ನಾಟಕದ ಸಂಸದ ಶಿವಕುಮಾರ್ ಉದಾಸಿ ತಿರುಗೇಟು ನೀಡಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

nineteen − seventeen =