Breaking News

ರಾಮಕೃಷ್ಣ ಮರಾಠೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Spread the love

ರಾಮಕೃಷ್ಣ ಮರಾಠೆ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಯುವ ಭಾರತ ಸುದ್ದಿ ಬೆಳಗಾವಿ :
2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಬೆಳಗಾವಿಯ ಸಾಹಿತಿ ಡಾ.ರಾಮಕೃಷ್ಣ ಮರಾಠೆ ಅವರಿಗೆ ಹನುಮಾನ ನಗರದಲ್ಲಿರುವ ಅವರ ನಿವಾಸದಲ್ಲಿ ಭಾನುವಾರ(ಮಾ.5) ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ರಾಮಕೃಷ್ಣ ಮರಾಠೆ ಅವರಿಗೆ ಅನಿವಾರ್ಯ ಕಾರಣಗಳಿಂದಾಗಿ ರಾಜ್ಯೋತ್ಸವ ದಿನದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸುವುದು ಸಾಧ್ಯವಾಗಿರಲಿಲ್ಲ. ಆದ್ದರಿಂದ ಸರಕಾರದ‌ ಪರವಾಗಿ ಇಂದು ಅವರ ನಿವಾಸಕ್ಕೆ ಆಗಮಿಸಿ ಪ್ರಶಸ್ತಿಯನ್ನು ನೀಡಿ, ಸನ್ಮಾನಿಸಲಾಯಿತು.

ಶಾಸಕ ಅನಿಲ ಬೆನಕೆ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್, ಹುಕ್ಕೇರಿ ಮಠದ ಚಂದ್ರಶೇಖರ ಸ್ವಾಮೀಜಿ, ಹಿರಿಯ ಸಾಹಿತಿಗಳಾದ ಡಾ.ಸರಜೂ ಕಾಟ್ಕರ್, ಡಾ.ಎ‌.ಬಿ.ಘಾಟಗೆ , ಮರಾಠೆ ಅವರ ಧರ್ಮಪತ್ನಿ ಮೀರಾ ಮರಾಠೆ, ಡಾ. ಪಿ.ಜಿ.ಕೆಂಪಣ್ಣವರ, ರಂಗಾಯಣ ಧಾರವಾಡದ ಅಧ್ಯಕ್ಷ ರಮೇಶ ಪರವಿನಾಯ್ಕರ, ಕನ್ನಡ ಹೋರಾಟಗಾರ ಅನಂತಕುಮಾರ ಬ್ಯಾಕೂಡ,
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೆಶಕ ಅಶೋಕ ಚಲವಾದಿ, ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಮತ್ತಿತರರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

four + one =