Breaking News

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್

Spread the love

ಗೋಕಾಕನಲ್ಲಿ ಪ್ರತಿಷ್ಠಿತ ಉದ್ಯಮಿ ಕಿಡ್ನಾಪ್

ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ನಗರದಲ್ಲಿ ಶುಕ್ರವಾರ ಸಂಜೆ ಸುಮಾರಿಗೆ ಪ್ರತಿಷ್ಠಿತ ಉದ್ಯಮಿಯನ್ನು ಅಪಹರಿಸಲಾಗಿದೆ. ಈ ಬಗ್ಗೆ ಅವರ ಕುಟುಂಬದವರು ಅಪಹರಣ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಈ ಪ್ರಕರಣವನ್ನು ನಾಪತ್ತೆ ಎಂದು ದೂರು ದಾಖಲಿಸಿದ್ದು ಹಲವು ಸಂಶಯಗಳಿಗೆ ಕಾರಣವಾಗಿದೆ. ಅಪಹರಣ ನಡೆದು 24 ಗಂಟೆ ಕಳೆದರೂ ಇದುವರೆಗೂ ಪತ್ತೆಯಾಗಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಪೊಲೀಸರ ವೈಫಲ್ಯ ಇದಕ್ಕೆ ಪ್ರಮುಖ ಕಾರಣ. ಇದರಲ್ಲಿ ಪೊಲೀಸರು ಅಕ್ಷಮ್ಯ ಅಪರಾಧ ಎಸಗುತ್ತಿದ್ದು ಪೊಲೀಸರು ಈ ಬಗ್ಗೆ ಯಾವುದೇ ಕ್ರಮಕ್ಕೂ ಮುಂದಾಗುತ್ತಿಲ್ಲ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಗೋಕಾಕ ನಗರದ ಪ್ರತಿಷ್ಠಿತ ಉದ್ಯಮಿ ರಾಜು/ಮುನ್ನಾ ಝಂವರ ಶುಕ್ರವಾರ ಸಂಜೆ 6 ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಅವರು ಖಾಸಗಿ ವೈದ್ಯರೊಬ್ಬರ ಜೊತೆ ಆರು ಗಂಟೆ ಸುಮಾರಿಗೆ ಮಾತನಾಡುತ್ತಿದ್ದರು. ಅವರೊಂದಿಗೆ ಮಾತುಕತೆಯಾದ ನಂತರ ಅವರ ಫೋನ್ ಸ್ವಿಚ್ ಆಫ್ ಆಗಿದೆ. ನಂತರ ಅವರು ಪತ್ತೆಯಾಗಿಲ್ಲ ಎಂದು ಕುಟುಂಬಸ್ಥರು ಗೋಕಾಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ವೈದ್ಯರು ಮತ್ತು ಉದ್ಯಮಿ ನಡುವೆ ಹಣದ ವ್ಯವಹಾರ ನಡೆದಿದೆ ಎನ್ನಲಾಗಿದೆ. ಆದರೆ ಪೊಲೀಸರು ಇದೀಗ ಪ್ರಕರಣವನ್ನು ಭೇದಿಸುವಲ್ಲಿ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಒಟ್ಟಾರೆ ಇಡೀ ಗೋಕಾಕನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

6 + ten =