Breaking News

ಬೆಳಗಾವಿ ದಕ್ಷಿಣದಲ್ಲಿ ಕಣಕ್ಕಿಳಿಯಲು ಕಿರಣ ಜಾಧವ ಶತ ಪ್ರಯತ್ನ !

Spread the love

ಬೆಳಗಾವಿ ದಕ್ಷಿಣದಲ್ಲಿ ಕಣಕ್ಕಿಳಿಯಲು ಕಿರಣ ಜಾಧವ ಶತ ಪ್ರಯತ್ನ !

ಬೆಳಗಾವಿ : ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಕಿರಣ ಜಾಧವ ದೆಹಲಿಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸದ್ಯ ಅಭಯ್ ಪಾಟೀಲ್ ಬಿಜೆಪಿಯಿಂದ ಶಾಸಕರಾಗಿದ್ದಾರೆ. ಆದರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಸ್ಪರ್ಧಿಸಲು ಕಿರಣ್ ಜಾಧವ್ ಆಸಕ್ತರಾಗಿದ್ದು ಇದೀಗ ದೆಹಲಿ ಮಟ್ಟದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಜತೆ ಕಾಣಿಸಿದ್ದಾರೆ. ಕಿರಣ್ ಜಾಧವ್ ಈ ಮೊದಲು ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಆದರೆ ನಂತರದ ದಿನಗಳಲ್ಲಿ ಬಿಜೆಪಿಯ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ಗುರುತಿಸಿಕೊಂಡು ಪಕ್ಷವನ್ನು ಕಟ್ಟುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ. ಜೊತೆಗೆ ಮರಾಠಾ ಸಮಾಜದ ಮೂಲಕ ತಮಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರು ಪ್ರಯತ್ನ ನಡೆಸಿದ್ದಾರೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

twenty − 7 =