Breaking News

ರಮೇಶ ಜಾರಕಿಹೊಳಿ ಐದು ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ.-ಜಿ ಬಿ ಬಳಗಾರ !

Spread the love


ಯುವ ಭಾರತ ಸುದ್ದಿ,  ಗೋಕಾಕ: ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ತಾಲೂಕಿನ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಗೊಳಿಸಲು ಮುಂದಾಗಿದ್ದು ಹೆಮ್ಮೆಯ ಸಂಗತಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು.
ಅವರು, ಮಾಜಿ ಸಚಿವ ರಮೇಶ ಜಾರಕಿಹೊಳಿ ಗೃಹ ಕಚೇರಿಯಲ್ಲಿ ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರ ಹುಟ್ಟು ಹಬ್ಬದ ನಿಮಿತ್ಯ ಅಭಿಮಾನಿಗಳು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೆಎಮ್‌ಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಶಾಲೆಗಳ ಗ್ರಂಥಾಲಯಗಳಿಗೆ ಉಚಿತವಾಗಿ ನೀಡಿದ ಸಾವಿರ ಪುಸ್ತಕಗಳನ್ನು ಸ್ವೀಕರಿಸಿ ಮಾತನಾಡಿದರು.
ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳು ಅಭಿವೃದ್ಧಿ ಕಾಣದೆ ಇರುವುದು ಒಂದೆಡೆಯಾದರೆ ಖಾಸಗಿ ಶಾಲೆಗಳ ಆರ್ಭಟದಿಂದ ಬಳಲಿ ಬೆಂಡಾಗಿವೆ. ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಿ ಸಮಾಜಕ್ಕೆ ಕೊಡುಗೆ ನೀಡುತ್ತಿರುವ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮಾಜಿ ಸಚಿವ ಜಾರಕಿಹೊಳಿ ಅವರು ಮುಂದಾಗಿದ್ದಾರೆ.
ಗೋಕಾಕ ತಾಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ ಮತ್ತು ಸುಲಧಾಳ ಗ್ರಾಮದಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳನ್ನು ದತ್ತು ಪಡೆದುಕೊಂಡಿರುವ ಸಚಿವರು ಈ ಶಾಲೆಗಳ ಸಮಗ್ರ ಅಭಿವೃದ್ಧಿಗೆ ರೂಪು ರೇಷೆ ಸಿದ್ಧಪಡಿಸುವತ್ತ ಗಮನ ಹರಿಸಿದ್ದಾರೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಶಿವಾ ಫೌಂಡೇಷನ್ ಮಕ್ಕಳಿಗೆ ಉಪಹಾರ ಹಾಗೂ ಯೋಗಿಕೊಳ್ಳದ ಗೋ ಶಾಲೆಯಲ್ಲಿ ಗೋವುಗಳಿಗೆ ಮೇವು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಮುಖಂಡರಾದ ಗುರುಪ್ರಸಾದ ಪವಾಡೆ, ಲಕ್ಷಿö್ಮÃಕಾಂತ ಎತ್ತಿನಮನಿ, ಹನಮಂತ ದುರ್ಗನ್ನವರ, ಸುರೇಶ ಸನದಿ, ಕೆಂಪಣ್ಣ ಮೈಲನ್ನವರ, ಶಶಿಧರ ದೆಮಶೆಟ್ಟಿ, ರಾಜೇಂದ್ರ ಗೌಡಪ್ಪಗೋಳ, ಲಕ್ಷö್ಮಣ ಖಡಕಬಾವಿ, ಶಿವಾನಂದ ಹಿರೇಮಠ, ಮುತ್ತುರಾಜ ಜಮಖಂಡಿ, ಲಕ್ಕಪ್ಪ ತಹಶೀಲದಾರ, ಯಲ್ಲಪ್ಪ ನಾಯ್ಕ, ರಾಜೇಶ್ವರಿ ಒಡೆಯರ, ಶ್ರೀದೇವಿ ತಡಕೋಡ ಸೇರಿದಂತೆ ಅಮರನಾಥ ಜಾರಕಿಹೊಳಿ ಅಭಿಮಾನಿಗಳು ಇದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

6 + 5 =