ರಾಜ್ಯದ ಹಲವಡೆ ಕುಡಿಯುವ ನೀರಿಗೆ ಅಭಾವ : ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

ಬೆಂಗಳೂರು :
ಮುಂಗಾರು ಮಳೆ ವಿಳಂಬವಾದ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಕುಡಿಯುವ ನೀರಿನ ಅಭಾವ ತಲೆದೂರಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನದಿಗಳು, ಹಳ್ಳ, ಕೆರೆಗಳು ಖಾಲಿಯಾಗಿದ್ದು, ನೀರಿನ ಕೊರತೆ ಉಂಟಾಗಿದೆ.
ಈ ಬಾರಿ ಅತಿ ಬಿಸಿಲು ಕಾಣಿಸಿಕೊಂಡಿದೆ. ನಿರೀಕ್ಷೆಯಂತೆ ಮುಂಗಾರು ಮಳೆ ಸಹ ಆಗಮನವಾಗಿಲ್ಲ. ಹೀಗಾಗಿ ಕೆಲವಡೆ ಕುಡಿಯುವ ನೀರಿನ ಅಭಾವ ಕಾಣಿಸಿಕೊಂಡಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕುಡಿಯವ ನೀರಿನ ಸಮಸ್ಯೆ ಹಾಗೂ ಜಲಜೀವನ್ ಮಿಷನ್ ಕಾರ್ಯಕ್ರಮದ ಅನುಷ್ಠಾನ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಿಗದಿಯಾಗಿದೆ. ಜೊತೆಗೆ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
YuvaBharataha Latest Kannada News