Breaking News

ನಿಮ್ಮೆಲ್ಲ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಮನೋಭಾವನೆ ನನಗಿದ್ದು-ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ !!

Spread the love

ನಿಮ್ಮೆಲ್ಲ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಮನೋಭಾವನೆ ನನಗಿದ್ದು-ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ !!

ಯುವ ಭಾರತ ಸುದ್ದಿ  ರಾಮದುರ್ಗ : ಸಮಗ್ರ ಅಭಿವೃದ್ಧಿಗಾಗಿ ಪ್ರಥಮ ಪ್ರಾಶಸ್ತ್ಯ ದ ಮತಗಳ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿ ಜನಸೇವೆಗೆ ಅವಕಾಶ ಕಲ್ಪಿಸಿಕೊಡುವಂತೆ ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಮನವಿ ಮಾಡಿದರು.

ತಾಲೂಕಿನ ಗೊಡಚಿ ಗ್ರಾಮದ ರಾಮಯ್ಯಜ್ಜನ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜರುಗಿದ ರಾಮದುರ್ಗ ತಾಲೂಕಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಮನೋಭಾವನೆ ನನಗಿದ್ದು, ತಾಲೂಕಿನ ಶ್ರೇಯೋಭಿವೃದ್ಧಿಗಾಗಿ ನನಗೆ ಮೊದಲ ಪ್ರಾಶಸ್ತ್ಯ ದ ಮತ ನೀಡಿ ಆಶೀರ್ವಾದ ಮಾಡುವಂತೆ ಕೋರಿದರು.

ಶುಕ್ರವಾರ ೧೦ ರಂದು ನಡೆಯುವ ಬೆಳಗಾವಿ ದ್ವಿಸದಸ್ಯತ್ವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನನ್ನ ಶೇಜ್ ನಂ. ೫ ಇದ್ದು, ನನ್ನ ಭಾವ ಚಿತ್ರದ ಮುಂದೆ ೧ ಅಂತಾ ಬರೆದು ಪ್ರಥಮ ಪ್ರಾಶಸ್ತ್ಯ ದ ಮತವನ್ನು ನೀಡಬೇಕು. ಅಭಿವೃದ್ಧಿ ಕಾರ್ಯಗಳು ಸುಗಮವಾಗಿ ನಡೆಯಬೇಕು. ಯಾವುದೇ ಪಕ್ಷದ ಅಭ್ಯರ್ಥಿಯಾಗಿದ್ದರೆ ಆ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಳ್ಳಬೇಕಾಗುತ್ತದೆ. ಹೀಗಾಗಿ ಜಿಲ್ಲೆಯ ಎಲ್ಲ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯ ಪಡೆದು ಹಿರಿಯರ ಆಶೀರ್ವಾದದಿಂದ ಸ್ಪರ್ಧಿಸಿದ್ದೇನೆ. ನಿಮ್ಮಗಳ ಆಶೀರ್ವಾದವೇ ನಮಗೆ ಶ್ರೀರಕ್ಷೆಯಾಗಿದೆ ಎಂದು ಲಖನ್ ಜಾರಕಿಹೊಳಿ ತಿಳಿಸಿದರು.

ಪರಿಷತ್ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿದ್ದಾರೆ. ಇದರಲ್ಲಿ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರು ಸೇರಿದ್ದು, ಶಾಸಕ, ಸಂಸದರೂ ಸಹ ಮತದಾನ ಮಾಡುವ ಹಕ್ಕನ್ನು ಪಡೆದುಕೊಂಡಿದ್ದಾರೆ. ಹಿರಿಯರ ಆಶಯದಂತೆ ಅಭಿಮಾನಿಗಳ ಅಪೇಕ್ಷೆ ಮೇರೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಾ ಕಣದಲ್ಲಿದ್ದೇನೆ. ಅಭಿವೃದ್ಧಿಯೇ ನನ್ನ ಧ್ಯೇಯವಾಗಿದೆ. ಎಲ್ಲ ಸಮಾಜಗಳ ಮುಖಂಡರನ್ನು ವಿಶ್ವಾಸಕ್ಕೆ ಪಡೆದುಕೊಂಡಿದ್ದೇನೆ. ಅವರೂ ಸಹ ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವುದಾಗಿ ಭರವಸೆ ನೀಡಿದ್ದಾರೆ. ಪರಿಷತ್‌ಗೆ ಆಯ್ಕೆ ಮಾಡಿ ಇಡೀ ಜಿಲ್ಲೆಯ ಅಭಿವೃದ್ಧಿಗಾಗಿ ಕೈ ಜೋಡಿಸುವಂತೆ ಲಖನ್ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು.

ಶಿವನಗೌಡ ಪಾಟೀಲ, ಈರಣ್ಣಾ ಕಾಮನ್ನವರ, ಶ್ರೀಶೈಲ ಭೂಮನ್ನವರ, ಈರಣ್ಣಾ ಗುರವ, ಟಿ.ಆರ್. ಕಾಗಲ, ಮಡ್ಡೆಪ್ಪ ತೋಳಿನವರ, ಹಾಜಿ ಎಚ್.ಡಿ. ಮುಲ್ಲಾ ಸೇರಿದಂತೆ ರಾಮದುರ್ಗ ತಾಲೂಕಿನ ಗ್ರಾಮ ಪಂಚಾಯತ ಸದಸ್ಯರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಹಲವಾರು ಪ್ರತಿನಿಧಿಗಳು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

three − 2 =