ಅಂತೂ ಇಂತೂ ಕೊನೆಗೂ ನಾಮಪತ್ರ ಹಿಂಪಡೆದುಕೊಂಡ ಲಕ್ಷ್ಮೀ ಹೆಬ್ಬಾಳಕರ !

ಯುವ ಭಾರತ ಸುದ್ದಿ ಬೆಳಗಾವಿ :
ರಾಜ್ಯದ ಗಮನ ಸೆಳೆದಿರುವ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಹೆಸರಿನ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ.
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಕಂಗ್ರಾಳಿ ಬಿ.ಕೆ.ಗ್ರಾಮದ ನಿವಾಸಿ ಲಕ್ಷ್ಮೀ ಮನೋಹರ ಹೆಬ್ಬಾಳಕರ ಅವರು ಕೊನೆಗೂ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ. ಅವರು ನಾಮಪತ್ರ ಹಿಂಪಡೆದುಕೊಳ್ಳದೇ ಇದ್ದಲ್ಲಿ ಒಂದೇ ಹೆಸರಿನ ಇಬ್ಬರು ಮಹಿಳೆಯರ ಸ್ಪರ್ಧೆಯಿಂದ ಮತದಾರರಲ್ಲಿ ಗೊಂದಲ ನಿರ್ಮಾಣವಾಗುತ್ತಿತ್ತು.
YuvaBharataha Latest Kannada News