ಚುನಾವಣೆಗೆ ವೇತನ ಸಹಿತ ರಜೆ

ಯುವ ಭಾರತ ಸುದ್ದಿ ಬೆಳಗಾವಿ :
ಭಾರತ ಚುನಾವಣಾ ಆಯೋಗವು ಮೇ 10 ರಂದು ಕರ್ನಾಟಕ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ ನಿಗದಿಪಡಿಸಿದೆ.
ಅಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಹಾಗೂ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಮತ್ತು ಹಬ್ಬದ ರಜೆಗಳು) ಕಾಯ್ದೆಯ ಅರ್ಹ ಮತದಾರರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಮಾಲೀಕರು/ನಿಯೋಜಕರು ಅನುವು ಮಾಡಿ ಕೊಡಬೇಕಾಗಿ ತಿಳಿಸಿದ್ದಾರೆ. ತಪ್ಪಿದ್ದಲ್ಲಿ ಸಂಬಂಧಪಟ್ಟ ಸಂಸ್ಥೆ/ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
YuvaBharataha Latest Kannada News