ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ!!

ಯುವ ಭಾರತ ಸುದ್ದಿ ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಧಾರವಾಡದಲ್ಲಿ ನಡೆದ ಬಾಸ್ಕೇಟ್ ಬಾಲ್ ಪಂದ್ಯಾವಳಿಗಳಲ್ಲಿ ಕು.ಲಕ್ಷ್ಮೀ ಹೆಜ್ಜೆಗಾರ, ಕು.ನಮ್ರತಾ ಮರಾಠೆ, ಕು.ರೇಣುಕಾ ನಂದಿಯವರ, ಕು.ವಿಜಯಲಕ್ಷ್ಮೀ ಘಮಾನಿ ಹಾಗೂ ಕು.ಚೇತನಾ ಎಕ್ಕೇರಿಮಠ, ನಿಪ್ಪಾಣಿಯಲ್ಲಿ ನಡೆದ ಚೆಸ್ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ ಪಡೆದುಕೊಂಡ ಕು.ಫುರ್ಕಾನ್ ಬುಡ್ಡೇಭಾಯಿ ಮತ್ತು ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದ ಕರಾಟೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡ ಕು.ಓಂಕಾರ ಹುಂಡೇಕರ ಈ ಎಲ್ಲ ವಿದ್ಯಾರ್ಥಿಗಳು ಜಿಲ್ಲಾ ಹಾಗೂ ವಿಭಾಗ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಸಂಸ್ಥೆಯ ಚೇರಮನ್ನರಾದ ಲಖನ್ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ ಮುಂದಿನ ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಶುಭಕೋರಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಶಾಲೆ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚೇತನಾ ಪಾಗದ, ಶಾಲೆಯ ಆಡಳಿತಾಧಿಕಾರಿಗಳಾದ ಎಸ್ ಬಿ ಮುರಗೋಡ, ಶಾಲೆಯ ದೈಹಿಕ ಶಿಕ್ಷಕರಾದ ಪ್ರದೀಪ ಪಾಟೀಲ ಉಪಸ್ಥಿತರಿದ್ದರು.
YuvaBharataha Latest Kannada News