Breaking News

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ

Spread the love

ಸಚಿವ ಕಾರಜೋಳ ಭೇಟಿಯಾದ ಇಂಡಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಣಮಂತರಾಯಗೌಡ ಪಾಟೀಲ

ಯುವ ಭಾರತ ಸುದ್ದಿ ಇಂಡಿ :  ಬಿಜೆಪಿ ಸಹಕಾರಿ ಪ್ರಕೋಷ್ಠ ಜಿಲ್ಲಾ ಸಂಚಾಲಕ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ಹಣಮಂತ್ರಾಯಗೌಡ ಪಾಟೀಲ ಅವರು ಇಂಡಿ ವಿಧಾನಸೌಭಾ ಮತಕ್ಷೇತ್ರದ ಬಿಜೆಪಿ ಟಿಕೇಟ್ ಆಕಾಂಕ್ಷಿಯಾಗಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಸ್ವವಿವರದ ಮನವಿಯನ್ನು ಸೋಮವಾರ ಬೆಂಗಳೂರಿನಲ್ಲಿ ಸಲ್ಲಿಸಿದರು.

ಬಿಜೆಪಿ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತನಾಗಿ ಪಕ್ಷದ ಎಲ್ಲ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬರುತ್ತಿದ್ದು,ಎಂಎಲ್‌ಎ,ಎAಎಲ್‌ಸಿ ಹಾಗೂ ಎಂಪಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಲು ಸಾಕಷ್ಟು ಪ್ರಮಾಣಿಕವಾಗಿ ಪ್ರಯತ್ನ ಮಾಡಿದ್ದು,ಯುವ ಸಮುದಾಯಕ್ಕೆ ಹುರುದುಂಬಿಸಿ,ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ದಿ ಯೋಜನೆಗಳು ಪ್ರತಿ ಮನೆಗಳಿಗೆ ಮುಟ್ಟಿಸುವ ಕಾರ್ಯದಲ್ಲಿಯೂ ನಾನು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದೇನೆ.
ಈ ಮೊದಲು ನಮ್ಮ ತಂದೆಯವರು ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಇಂಡಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ರಾಷ್ಟç,ರಾಜ್ಯಮಟ್ಟದ ನಾಯಕರೊಂದಿಗೆ ಉತ್ತಮ ಬಾಂಧ್ಯವ್ಯ ಹೊಂದಿದ್ದು,ರಾಜಕೀಯ ಮನೆತನದ ಕುಟುಂಬ ಆಗಿರುವುದರಿಂದ ಈ ಬಾರಿ ಇಂಡಿ ಮತಕ್ಷೇತ್ರದ ಬಿಜೆಪಿ ಟಿಕೇಟ್ ನೀಡಲು ಆಕಾಂಕ್ಷಿ ಅಭ್ಯರ್ಥಿಯಾಗಿ ಸ್ವವಿವರವನ್ನು ಒದಗಿಸುತ್ತಿದ್ದೇನೆ ಎಂದು ಸಚಿವರಿಗೆ ಸ್ವವಿವರದ ಪತ್ರವನ್ನು ನೀಡಿದ್ದೇನೆ ಎಂದು ಹಣಮಂತ್ರಾಯಗೌಡ ಪಾಟೀಲ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ,ಪುರಸಭೆ ಸದಸ್ಯ ದೇವೇಂದ್ರ ಕುಂಬಾರ ಇತರರು ಇದ್ದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

five × 1 =