Breaking News

ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ : ಶಂಕರಗೌಡ ಬಿರಾದಾರ

Spread the love

ಪಂಚಮಸಾಲಿ ಸಮಾಜದಿಂದ ಬೃಹತ್ ಹೋರಾಟ : ಶಂಕರಗೌಡ ಬಿರಾದಾರ

ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಸರ್ಕಾರದ ಆದೇಶದ ಪ್ರತಿ ಸಿಗುವವರೆಗೂ ಹೋರಾಟ ಮಾಡಲಾಗುವುದು ಅದರಂತೆ ಜನವರಿ 13ರಂದು ಜಿಲ್ಲೆಯ ಶಿಗ್ಗಾವಿಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಎದುರು ಒಂದು ದಿನದ ಧರಣಿ ನಡೆಸಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಶಂಕರಗೌಡ ಬಿರಾದಾರ್ ಹೇಳಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಡಿಸೆಂಬರ್ 29ರ ವರೆಗೆ ಸಮಯ ತೆಗೆದುಕೊಂಡಿದ್ದರು ಬೆಳಗಾವಿಯಲ್ಲಿ ನಡೆದ ಬೃಹತ್ ಸಮಾವೇಶದ ದಿನದಂದು ಮೀಸಲಾತಿ ಸಿಗುವ ಭರವಸೆ ಇತ್ತು ಆದರೆ ಹೊಸದಾಗಿ 2ಡಿ ಗುಂಪು ರಚಿಸುವುದಾಗಿ ಮುಖ್ಯಮಂತ್ರಿಗಳು ಕಾನೂನು ಸಚಿವರ ಮೂಲಕ ಘೋಷಣೆ ಮಾಡಿದರು 2ಡಿ ಮೀಸಲಾತಿಯಲ್ಲಿ ನಮ್ಮ ಪಂಚಮಸಾಲಿ ಸಮುದಾಯಕ್ಕೆ ಏಸ್ಟು ಪರ್ಸೆಂಟೇಜ್ ಮೀಸಲಾತಿಯನ್ನು ಕೊಡುತ್ತಾರೆ ಎಂಬುದು ಅಸ್ಪಷ್ಟವಾಗಿದೆ ನಾವು ಕೂಡ ಬಹಳ ಗೊಂದಲದಿದ್ದೇವೆ ನಮ್ಮ ಸಮುದಾಯ ಅಸಮಾಧಾನ ಆಗಿದೆ ಎಂದು ಹೇಳಿದರು.

2ಡಿ ಯನ್ನು ರಚನೆ ಮಾಡಲು ಸಾಧ್ಯವಿಲ್ಲವೆಂದು ಕಾನೂನ ತಜ್ಞರು ಹೇಳುತ್ತಿದ್ದಾರೆ ಈ ಕುರಿತು ಸ್ಪಷ್ಟೀಕರಣ ನೀಡಿ ಆದೇಶ ಹೊರಡಿಸಬೇಕು 2ಡಿಯಲ್ಲಿ ಏನಿದೆ ಇದೆ ಎಂಬುದನ್ನು ಸರಕಾರ ನಮಗೆ ತಿಳಿಸಬೇಕು ಘೋಷಣೆಯ ಆದೇಶ ಪತ್ರ ನೀಡಿದರೆ ಅದನ್ನು ಸ್ವೀಕರಿಸುವ ತಿರಸ್ಕರಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು
ಕೂಡಲಸಂಗಮದ ಲಿಂಗಯತ ಪಂಚಮಸಾಲಿ ಜಗದ್ಗುರು ಪೀಠದ ಪ್ರಥಮ ಜಗದ್ಗುರುಗಳಾದ ಬಸವ ಜಯ ಮೃತ್ಯುಂಜಯ ಸ್ವಾಮಿಜಿ ಅವರ ನೇತೃತ್ವದಲ್ಲಿ ಕೂಡಲಸಂಗಮದಿಂದ ಬೆಂಗಳೂರಿನವರೆಗೆ ಸುಮಾರು 750ಕಿಲೋ ಮೀಟರ್ ಪಾದಯಾತ್ರೆ ಮಾಡಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ 2ಎ ಸಲಾತಿಯ ಹಕ್ಕೋತ್ತಾಯದ ಸಮಾವೇಶ ಮಾಡಿದ ನಂತರ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಯವರು ಸಮುದಾಯದ ಕುಲಷಾಸ್ತ್ರ ಅಧ್ಯಯನದ ವರದಿ ಬಂದ ನಂತರ ತಮಗೆ ಮೀಸಲಾತಿ ಕೊಡುವುದಾಗಿ ಭರವಸೆ ನೀಡಿದ್ದರು ಇತ್ತೀಚಿಗೆ ಬೆಳಗಾವಿಯಲ್ಲಿ ಮತ್ತೆ ಸುಮಾರು 15 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಿ ಇಲ್ಲದೆ ಹೋದರೆ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದಾಗ ಮತ್ತೆ ನಮ್ಮ ಸಮುದಾಯಕ್ಕೆ ಸರ್ಕಾರ ಅನ್ಯಾಯ ಮಾಡಿದೆ ಇತ್ತೀಚಿಗೆ ಬೆಳಗಾವಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಭೆಯಲ್ಲಿ 2ಡಿ ಮೀಸಲಾತಿಯನ್ನು ತಿರಸ್ಕರಿಸಲಾಗಿದೆ ಮುಖ್ಯಮಂತ್ರಿಗಳ ಮನೆ ಮುಂದೆ ನಡೆಯುವ ಧರಣಿ ಸತ್ಯಾಗ್ರಹದಲ್ಲಿ ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಶಿಗ್ಗಾವಿಗೆ ಬರಬೇಕೆಂದು ಈ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ 2ಎ ಮೀಸಲಾತಿ ಜಿಲ್ಲಾ ಹೋರಾಟ ಸಮಿತಿಯ ಗೌರವ ಅಧ್ಯಕ್ಷರಾದ ಎಂ.ಎಸ್ ರುದ್ರಗೌಡರ್ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷರಾದ ಬಿ ಎಂ ಪಾಟೀಲ್ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಸೋಮಶೇಖರ್ ದೇವರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗನಗೌಡ ಸೋಲಾಪುರ್ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಹಿರೇಬೂದನೂರ : ಭಕ್ತರ ಸನ್ಮಾನ

Spread the loveಹಿರೇಬೂದನೂರ : ಭಕ್ತರ ಸನ್ಮಾನ ಮುರಗೋಡ : ಹಿರೇಬೂದನೂರ ಗ್ರಾಮದ ಶ್ರೀ ಸದ್ಗುರು ಸಂತ ಬಾಳುಮಾಮಾ ದೇವಸ್ಥಾನದ …

Leave a Reply

Your email address will not be published. Required fields are marked *

six − five =