Breaking News

ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಕನಕದಾಸರು ನಮ್ಮೆಲ್ಲರಿಗೂ ಆದರ್ಶ-ಸಚಿವ ರಮೇಶ ಜಾರಕಿಹೊಳಿ .!

Spread the love


ಗೋಕಾಕ: ಜಾತಿ ಮತಗಳ ತಾರತಮ್ಯವನ್ನು ಖಂಡಿಸಿ ಸಾಮಾಜಿಕ ಸಮಾನತೆಯನ್ನು ಪ್ರತಿಪಾದಿಸಿದ ಕನಕದಾಸರ ಆದರ್ಶಗಳು ಸರ್ವರಿಗೂ ಸರ್ವಕಾಲಕ್ಕೂ ಆದರ್ಶವಾಗಿವೆ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಗುರುವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ಆಚರಿಸಲಾದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ದಾಸ ಸಾಹಿತ್ಯಕ್ಕೆ ವೈಚಾರಿಕತೆಯ ನೆಲೆಗಟ್ಟನ್ನು ಕೊಟ್ಟ ಸಂತ ಕನಕದಾಸರು ಸಾಹಿತ್ಯದ ಮೂಲಕ ಸಮಾಜದ ಅಂಕುಡೊAಕು ತಿದ್ದಲು ಶ್ರಮಿಸಿದ್ದರು, ಅವರ ಆದರ್ಶಗಳನ್ನು ಆಚರಣೆಗೆ ತರುವ ಮೂಲಕ ಮೌಲ್ಯಯುತ ಸಮಾಜ ನಿರ್ಮಿಸಲು ನಾವೆಲ್ಲರೂ ಶ್ರಮಿಸೋಣವೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರುಗಳಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಬಿಜೆಪಿ ಕಾರ್ಯಕರ್ತರು ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ನಗರದ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ಪ್ರತಿಭಟನೆ!!

Spread the loveನಗರದ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ಪ್ರತಿಭಟನೆ!! ಗೋಕಾಕ: ನಗರದ ಖಾಸಗಿ ಆರೋಗ್ಯ ಆಧಾರ ಆಸ್ಪತ್ರೆಯಲ್ಲಿ ನವಜಾತ ಶಿಶು …

Leave a Reply

Your email address will not be published. Required fields are marked *

five × four =