ಯುವ ಭಾರತ ಸುುದ್ದಿ, ಗೋಕಾಕ: ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 15 ರಿಂದ ದಿ.2೦ ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ದಿ.೧೫ ರಂದು ಬೆಳಿಗ್ಗೆ ೯.೩೫ರಿಂದ ಗೋಕಾಕ ನಗರದ ತಮ್ಮ ಗೃಹ ಕಚೇರಿಯಲ್ಲಿ ಗೋಕಾಕ ನಗರದ ಸಾರ್ವಜನಿಕರ ಕುಂದು ಕುರತೆಗಳ ವಿಚಾರಣೆ ನಡೆಸಿ, ಮಧ್ಯಾಹ್ನ ೨ ಗಂಟೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ವಿಚಾರಣೆ ನಡೆಸಿ, ಸಂಜೆ ಗೋಕಾಕ ವಾಸ್ತವ್ಯ. ದಿ.೧೬ ರಂದು ಬೆಳಗಾವಿಯಲ್ಲಿ ಕೋವಿಡ್- ೧೯ ಹಾಗೂ ನೆರೆಹಾವಳಿಗೆ ಸಂಬAಧಿಸಿದAತೆ ಕೈಗೊಂಡ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ, ಸಂಜೆ ಗೋಕಾಕ ವಾಸ್ತವ್ಯ.
ದಿ.೧೭ ರಂದು ಗೋಕಾಕ ನಗರದ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ವಿಚಾರಣೆ ನಡೆಸುವರು. ಗೋಕಾಕ ವಾಸ್ತವ್ಯ. ದಿ. ೧೮ ರಂದು ಗೋಕಾಕ ತಾಲೂಕಿನ ಅಂಕಲಗಿ ಗ್ರಾಮ ಪಂಚಾಯತಿ ಹೊಸ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ ೨ ಗಂಟೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಕುಂದುಕೊರತೆಗಳನ್ನು ವಿಚಾರಣೆ ನಡೆಸಿ, ಸಂಜೆ ಗೋಕಾಕ ವಾಸ್ತವ್ಯ.
ದಿ.೧೯ ರಂದು ಸಚಿವರ ಕಾರ್ಯಕ್ರಮ ಕಾಯ್ದಿರಿಸಲಾಗಿದೆ. ದಿ. ೨೦ ರಂದು ಗೋಕಾಕ ನಗರದಿಂದ ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ಕೇಂದ್ರ ಕಚೇರಿಗೆ ತೆರಳಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮಾರಂಗಪ್ಪನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Check Also
ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love ಗೋಕಾಕ; ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು …