Breaking News

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಯುವ ಭಾರತ ಸುದ್ದಿ ಮೂಡಲಗಿ :
ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪಟ್ಟಣದ ವ್ಯಾಪ್ತಿಯಲ್ಲಿ ಬರುವ ರಸ್ತೆ ನಿರ್ಮಾಣ ಮತ್ತು ಒಳಚರಂಡಿ ಕಾಮಗಾರಿಗಳು ಆದಷ್ಟು ಬೇಗನೇ ಪೂರ್ಣ ಮಾಡುವಂತೆ ಸೂಚಿಸಿದರು.
ಕಲ್ಲೋಳಿ ಪಟ್ಟಣದ ನಾಗರೀಕರಿಗೆ ಸಮರ್ಪಕ ಮೂಲ ಸೌಕರ್ಯಗಳನ್ನು ಒದಗಿಸುವ ದೃಷ್ಠಿಯಿಂದ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನಾಗರೀಕರ ಮೂಲ ಸಮಸ್ಯೆಗಳಿಗೆ ಒತ್ತು ನೀಡಿ ಅವುಗಳಿಗೆ ಪರಿಹಾರ ದೊರಕಿಸಿಕೊಡುವಂತೆ ಪ.ಪಂ ಸದಸ್ಯರಿಗೆ ಸೂಚಿಸಿದ ಅವರು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ ಮತ ನೀಡಿದ ಮತದಾರರ ಋಣ ತೀರಿಸುವಂತೆ ಸದಸ್ಯರಿಗೆ ಸಲಹೆ ನೀಡಿದರು.

ಅರಭಾವಿ ಮತಕ್ಷೇತ್ರದಲ್ಲಿ ಎಲ್ಲ ರಸ್ತೆ ಕಾಮಗಾರಿಗಳನ್ನು ಸುಧಾರಣೆ ಮಾಡುತ್ತಿದ್ದೇವೆ. ಇನ್ನೇರಡು ತಿಂಗಳಲ್ಲಿ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಈ ಬಗ್ಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಜಿ.ಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಪರಪ್ಪ ಕಡಾಡಿ, ಸುಭಾಶ ಕುರಬೇಟ, ಮಹಾಂತೇಶ ಕಪ್ಪಲಗುದ್ದಿ, ವಸಂತ ತಹಶೀಲದಾರ, ಮಲ್ಲಪ್ಪ ಹೆಬ್ಬಾಳ, ಬಸವರಾಜ ಯಾದಗೂಡ, ಮಲ್ಲಪ್ಪ ಖಾನಾಪೂರ, ಅಶೋಕ ಮಕ್ಕಳಗೇರಿ, ಮೋಹನ ಗಾಡಿವಡ್ಡರ, ಮಾಳಪ್ಪ ಸನದಿ, ರಾಮಪ್ಪ ಹಡಗಿನಾಳ, ಸಂಜು ಕಳ್ಳಿಗುದ್ದಿ, ಭೀಮಶಿ ಗೊರೋಶಿ, ರಾಮಪ್ಪ ಗಾಣಿಗೇರ, ಮಹಾದೇವ ಮದಭಾವಿ, ಪ.ಪಂ ಮುಖ್ಯಾಧಿಕಾರಿ ಪಾಂಡು ಬಂಗೇನ್ನವರ, ಬಾಗಿ ತೋಟದ ನಿವಾಸಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.


Spread the love

About Yuva Bharatha

Check Also

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ …

Leave a Reply

Your email address will not be published. Required fields are marked *

two × 4 =