Breaking News

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!

Spread the love

ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಮೇಶ ಜಾರಕಿಹೊಳಿ.!


ಗೋಕಾಕ: ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು ಮೇಲ್ದರ್ಜೆಗೆರಿಸಲು ಸರಕಾರದಿಂದ ಅನುಮತಿ ದೊರೆತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ರವಿವಾರದಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈಗಾಗಲೇ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಗುವ ಸಕಲ ಸೌಲಭ್ಯಗಳನ್ನು ದೊರೆಯುತ್ತಿದ್ದು, ಇನ್ನೂ ಹೆಚ್ಚಿನ ಅನುಕೂಲವಾಗಲು ಈಗಿರುವ ೧೦೦ ಹಾಸಿಗೆ ಆಸ್ಪತ್ರೆಯನ್ನು ೨೫೦ಕ್ಕೆ ಏರಿಸಲು ಕ್ರಮ ಜರುಗಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಆರೋಗ್ಯವಂತ ಸಮಾಜ ನಿರ್ಮಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.
ಎಲ್ಲಾ ತಾಯಂದಿರು ತಮ್ಮ ೫ ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಫಲ್ಸ್ ಪೊಲೀಯೋ ಹಾಕಿಸಿ ಪೊಲೀಯೋ ಮುಕ್ತ ಭಾರತ ನಿರ್ಮಿಸಲು ಸಹಕರಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಇಒ ಜಿ.ಬಿ.ಬಳಗಾರ, ಡಾ.ಎಂ.ಎA ಕೋಣಿ, ಡಾ.ಬಿ.ಎ. ಬಾಗಲಕೋಟೆ, ಡಾ.ದೀಪಾ ತುಬಾಕಿ, ಡಾ. ಅಂಗಡಿ, ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ, ದಿಲೀಪ್ ಮೆಳವಂಕಿ, ಪರಮೇಶಿ ಗುಲ್ ಸೇರಿದಂತೆ ನಗರಸಭೆ ಸದಸ್ಯರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

five × three =