ವಿಮಾನ ನಿಲ್ದಾಣ ಉದ್ಘಾಟಿಸಿ ಬೆಳಗಾವಿಗೆ ಬಂದ ಮೋದಿ !

Spread the love

ವಿಮಾನ ನಿಲ್ದಾಣ ಉದ್ಘಾಟಿಸಿ ಬೆಳಗಾವಿಗೆ ಬಂದ ಮೋದಿ !

 

ಯುವ ಭಾರತ ಸುದ್ದಿ ಬೆಳಗಾವಿ/ಶಿವಮೊಗ್ಗ:
ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಬಂದಿಳಿದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಿಂದ ನೇರವಾಗಿ ಕೆ ಎಸ್ ಆರ್ ಪಿ ಮೈದಾನಕ್ಕೆ ಬಂದಿಳಿದಿದ್ದಾರೆ. ನಂತರ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ವಿಮಾನ ನಿಲ್ದಾಣ ಉದ್ಘಾಟನೆ :
ಶಿವಮೊಗ್ಗ– ಭದ್ರಾವತಿ ನಗರಗಳ ಮಧ್ಯೆ ಇರುವ ಸೋಗಾನೆ ಬಳಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದರು.

449 ಕೋಟಿ ವೆಚ್ಚದಲ್ಲಿ 778 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ.

ನಂತರ ವಿಮಾನ ನಿಲ್ದಾಣದ ಕಿರು ಚಿತ್ರವನ್ನು ಪ್ರದರ್ಶಿಸಲಾಯಿತು. ಹವಾಯಿ ಚಪ್ಪಲಿ ಹಾಕುವವರು ವಿಮಾನದಲ್ಲಿ ಓಡಾಟ ನಡೆಸಬೇಕು ಎಂಬ ಆಶಯದೊಂದಿಗೆ ಉಡಾನ್ ಯೋಜನೆ ಆರಂಭಿಸಲಾಗಿದೆ ಎಂದು ಪ್ರಧಾನಿ ಹೇಳುವ ಮಾತಿನೊಂದಿಗೆ ಕಿರುಚಿತ್ರ ಆರಂಭವಾಗಿ ವಿಮಾನ ನಿಲ್ದಾಣ ಹೊಂದಿರುವ ಸವಲತ್ತುಗಳ ಬಗ್ಗೆಯೂ ಮಾಹಿತಿ ಆರಂಭವಾಯಿತು. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ₹3600 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಪ್ರಧಾನಿ ಆಗಮಿಸಿದ ವಿಮಾನವು ಹೊಸ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್ ಆಯಿತು.

ಮೋದಿ ಬೆಳಗಾವಿಗೆ ತೆರಳಿದ್ದು, ರಾಣಿ ಚನ್ನಮ್ಮ ವೃತ್ತದಿಂದ ರೋಡ್‌ ಶೋ ನಡೆಸಲಿದ್ದಾರೆ. ಒಂದು ಲಕ್ಷ ಕುರ್ಚಿಗಳನ್ನು ಹಾಕಲಾಗಿದೆ. ಲಕ್ಷ ಜನರಿಗೆ ಊಟ, ನೀರಿನ ವ್ಯವಸ್ಥೆ ಇರಲಿದೆ.

2007 ರಲ್ಲಿ ಬಿ.ಎಸ್‌.ಯಡಿಯೂರಪ್ಪ ಉಪಮುಖ್ಯಮಂತ್ರಿ ಆಗಿದ್ದಾಗ ಸೋಗಾನೆಯಲ್ಲಿ ಕಿರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. ಮೊದಲು ಟೆಂಡರ್ ಪಡೆದಿದ್ದ ಗುತ್ತಿಗೆದಾರರು ಕಾಮಗಾರಿ ನಿರ್ವಹಣೆಯಿಂದ ಹಿಂದೆ ಸರಿದಿದ್ದರು. ನಂತರ ಬಂದ ಸರ್ಕಾರಗಳು ಆಸಕ್ತಿ ತೋರದ ಕಾರಣ ವಿಮಾನ ನಿಲ್ದಾಣ ಕಾಮಗಾರಿ ವಿಳಂಬವಾಗಿತ್ತು.

2019ರಲ್ಲಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಮಾನ ನಿಲ್ದಾಣದ ವಿನ್ಯಾಸ ಬದಲಿಸಿತ್ತು. ಬೋಯಿಂಗ್‌ನಂತಹ ದೊಡ್ಡ ವಿಮಾನ ಇಳಿಯಲು ಅವಕಾಶ ಕಲ್ಪಿಸಿ, ರನ್ ವೇ ಉದ್ದವನ್ನು 2.05 ಕಿ.ಮೀ ಬದಲಿಗೆ, 3.20 ಕಿ.ಮೀ.ಗೆ ಹೆಚ್ಚಿಸಲಾಯಿತು. ರಾತ್ರಿ ವೇಳೆ ವಿಮಾನ ಇಳಿಯುವ ಸೌಲಭ್ಯ ಕಲ್ಪಿಸಲಾಯಿತು. ಇದರಿಂದ ಯೋಜನಾ ವೆಚ್ಚ ₹ 220 ಕೋಟಿಯಿಂದ ₹449.22 ಕೋಟಿಗೆ ಏರಿಕೆಯಾಯಿತು.


Spread the love

About Yuva Bharatha

Check Also

ಆಧಾರ್ ಕಾರ್ಡ್ ಕುರಿತು ಮಹತ್ವದ ಮಾಹಿತಿ

Spread the loveಆಧಾರ್ ಕಾರ್ಡ್ ಕುರಿತು ಮಹತ್ವದ ಮಾಹಿತಿ ನವದೆಹಲಿ : ಉಚಿತವಾಗಿ ಆಧಾರ್ ಕಾರ್ಡ್ ಅಪ್ ಡೇಟ್ ಮಾಡಲು …

Leave a Reply

Your email address will not be published. Required fields are marked *

one × 4 =