ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಯುವ ಭಾರತ ಸುದ್ದಿ, ಗೋಕಾಕ್ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರವಿವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗೆ ಹಮ್ಮಿಕೊಂಡ ಅಭಿನಂದನಾ ಸಮಾರಂಭದಲ್ಲಿ ವಾರಿಯರ್ಸ್‍ಗಳಿಗೆ ಅಭಿನಂದನಾ ಪತ್ರ ನೀಡಿ ಮಾತನಾಡುತ್ತಿದ್ದರು.
ಕೋವಿಡ್-19 ನ ಸಂದಿಗ್ಧ ಪರಿಸ್ಥಿತಿಯಲ್ಲಿ ನೀವು ಸಲ್ಲಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದ್ದು, ನಿಮ್ಮ ಕಾರ್ಯವನ್ನು ಗುರುತಿಸಿ ಪ್ರೋತ್ಸಾಹಿಸಿ ನಿಮ್ಮ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ಉದ್ಧೇಶದಿಂದ ಈ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ನಿಮ್ಮ ಈ ಪವಿತ್ರ ಕಾರ್ಯಕ್ಕೆ ಆ ದೇವರು ನಿಮಗೆ ಒಳ್ಳೆಯದನ್ನೇ ಮಾಡುತ್ತಾನೆ. ಈ ನಿಮ್ಮ ಕಾರ್ಯ ಬೆಲೆ ಕಟ್ಟಲಾಗದು ಎಂದು ಹೇಳಿದರು.
ನನ್ನ ಕ್ಷೇತ್ರದ ಜನರ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಆಗಿದೆ. ಕ್ಷೇತ್ರದ ಜನತೆಯ ಹೃದಯದಲ್ಲಿ ನಾನು ಇದ್ದೇನೆ. ನನ್ನ ಹೃದಯದಲ್ಲಿ ಕ್ಷೇತ್ರದ ಜನತೆ ಇದ್ದಾರೆ. ಪುಣ್ಯದಿಂದ ಅವರ ಸೇವೆ ಮಾಡುವ ಭಾಗ್ಯ ದೊರೆತಿದ್ದು, ಅದನ್ನು ಪ್ರಾಮಾಣ ಕವಾಗಿ ಮಾಡುತ್ತಿರುವುದಾಗಿ ತಿಳಿಸಿದ ಅವರು, ಇದೇ ರೀತಿ ನಿಮ್ಮೆಲ್ಲರ ಸಹಕಾರ ಹಾಗೂ ಜನತೆಯ ಆಶೀರ್ವಾದ ನನ್ನ ಮೇಲಿರಲಿ ಎಂದು ಹೇಳಿದರು.
ಕೊರೋನಾ ವಾರಿಯರ್ಸ್‍ಗೆ ಪ್ರೋತ್ಸಾಹ ಧನ ಪ್ರಕಟಿಸಿದ ಬಾಲಚಂದ್ರ ಜಾರಕಿಹೊಳಿ : ತಮ್ಮ ಜೀವದ ಹಂಗು ತೊರೆದು ಕೊರೋನಾ ನಿಯಂತ್ರಿಸುವಲ್ಲಿ ಸಾಮಾಜಿಕ ಜವಾಬ್ದಾರಿ ನಿರ್ವಹಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳನ್ನು ಮುಕ್ತ ಕಂಠದಿಂದ ಅಭಿನಂದಿಸಿದ ಅವರು, ದಸರಾ ಹಬ್ಬದ ಪ್ರಯುಕ್ತ 2766 ಕೊರೋನಾ ವಾರಿಯರ್ಸ್‍ಗಳಿಗೆ ತಲಾ 5 ಸಾವಿರ ರೂ.ಗಳ ವೈಯಕ್ತಿಕ ಪ್ರೋತ್ಸಾಹ ಧನ ಪ್ರಕಟಿಸಿದರು. ಜೊತೆಗೆ ಕೊರೋನಾ ನಿಯಂತ್ರಣಕ್ಕೆ ಸೇನಾನಿಗಳಂತೆ ಕರ್ತವ್ಯ ನಿರ್ವಹಿಸುತ್ತಿರುವ 80 ಜನ ಅಧಿಕಾರಿಗಳಿಗೆ ತಲಾ ಒಂದೊಂದು ಸ್ಮಾರ್ಟಫೋನ್‍ಗಳನ್ನು ವೈಯಕ್ತಿಕವಾಗಿ ನೀಡುವುದಾಗಿ ಹೇಳಿದ ಅವರು, ಇನ್ನೆರಡು ದಿನಗಳ ಒಳಗಾಗಿ ಕೊರೋನಾ ವಾರಿಯರ್ಸ್‍ಗಳಿಗೆ ದಸರಾ ಹಬ್ಬದ ಪ್ರಯುಕ್ತ ಈ ಗಿಫ್ಟ್‍ಗಳನ್ನು ವಿತರಿಸುವುದಾಗಿ ತಿಳಿಸಿದರು.
ಹಿರಿಯ ತಜ್ಞ ವೈದ್ಯ ಡಾ.ಆರ್.ಎಸ್. ಬೆಣಚಿನಮರಡಿ ಹಾಗೂ ಮೂಡಲಗಿ ಬಿಇಓ ಅಜೀತ ಮನ್ನಿಕೇರಿ ಮಾತನಾಡಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊರೋನಾ ವೈರಸ್ ನಿಯಂತ್ರಿಸುವಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಿ ರಾಜ್ಯದಲ್ಲಿಯೇ ಮಾದರಿಯಾಗಿ ಕಾರ್ಯ ಮಾಡುತ್ತಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ 85 ಸಾವಿರ ಕುಟುಂಬಗಳಿಗೆ ಆಹಾರ ಧಾನ್ಯಗಳ ಕಿಟ್‍ಗಳು, ಪ್ರತಿ ಮನೆ ಮನೆಗಳಿಗೆ ಮಾಸ್ಕ್‍ಗಳನ್ನು ವಿತರಿಸಿದ್ದಾರೆ. ಕೋವಿಡ್ ಕೇರ್ ಸೆಂಟರ್‍ಗಳಿಗೆ ಆಕ್ಷಿಜನ್ ಸಿಲಿಂಡರ್‍ಗಳು ಹಾಗೂ ಸೋಂಕಿತರಿಗೆ ದಿನಬಳಕೆಯ ಅಗತ್ಯ ಸಾಮಗ್ರಿಗಳ ಕಿಟ್‍ಗಳನ್ನು ವಿತರಿಸಿ ಈ ವೈರಸ್ ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ. ವಾರಿಯರ್ಸ್‍ಗಳಿಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸಿ ಸೋಂಕಿತರೊಂದಿಗೆ ದೂರವಾಣ ಯೊಂದಿಗೆ ಮಾತನಾಡಿ ಧೈರ್ಯ ತುಂಬುವಂತಹ ವಿಶೇಷ ಕಾರ್ಯಗಳನ್ನು ಮಾಡುವುದರೊಂದಿಗೆ ರಾಜ್ಯದಲ್ಲಿಯೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಮಾರ್ಗದರ್ಶನದಲ್ಲಿ ಈ ವೈರಸ್‍ನ್ನು ಸಂಪೂರ್ಣ ಹತೋಟಿಗೆ ತರಲು ನಾವೆಲ್ಲ ಶ್ರಮಿಸೋಣವೆಂದರು.
ಈ ಸಂದರ್ಭದಲ್ಲಿ ಮೂಡಲಗಿ ತಹಶೀಲ್ದಾರ ಡಿ.ಜೆ. ಮಹಾತ, ಸರ್ಕಾರಿ ಆಸ್ಪತ್ರೆಯ ತಾಲೂಕಾ ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟೀನ, ಡಾ.ಜಗದೀಶ ಜಿಂಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ. ಬಳಗಾರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಾಯ್.ಎಂ. ಗುಜನಟ್ಟಿ, ಹಿಂದುಳಿದ ವರ್ಗಗಳ ತಾಲೂಕಾ ವಿಸ್ತರಣಾಧಿಕಾರಿ ಬಿಸಿರೊಟ್ಟಿ, ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ, ಪಿಎಸ್‍ಐಗಳಾದ ಮಲ್ಲಿಕಾರ್ಜುನ ಸಿಂಧೂರ, ಎಚ್.ವಾಯ್. ಬಾಲದಂಡಿ, ಎಚ್.ಕೆ. ನರಳೆ, ಪಪಂ ಮುಖ್ಯಾಧಿಕಾರಿಗಳಾದ ಕೆ.ಬಿ. ಬೆಣ ್ಣ, ರವಿ ರಂಗಸುಭೆ, ಮದ್ಯಾಹ್ನ ಬಿಸಿಯೂಟ ಯೋಜನೆಯ ಸಹಾಯಕ ನಿರ್ದೇಶಕ ಎ.ಬಿ. ಮಲಬನ್ನವರ, ವಸತಿ ಶಿಕ್ಷಣ ಇಲಾಖೆಯ ಜಿಲ್ಲಾ ಸಂಯೋಜನಾಧಿಕಾರಿ ಆರ್.ಬಿ. ಗಂಗರಡ್ಡಿ, ಮುಂತಾದವರು ಉಪಸ್ಥಿತರಿದ್ದರು.