ಮೂಡಲಗಿ: ಮಾನವ ಬಂಧುತ್ವ ವೇದಿಕೆ ಹಾಗೂ ಯುವ ಜೀವನ ಸೇವಾ ಸಂಸ್ಥೆ, ಕರುನಾಡು ಸೈನಿಕ ತರಬೇತಿ ಕೇಂದ್ರ ಹಾಗೂ ಜೈ ಭೀಮ ಯುವಕರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ ಅವರ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಮೌಢ್ಯ ವಿರೋಧಿ ದಿನಾಚರಣೆಯನ್ನು ಡಿ.6ರಂದು ಪಟ್ಟಣದ ರುದ್ರಭೂಮಿಯಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಮಾಜ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುವುದರ ಜೊತೆಗೆ ಕೊರೋನಾ ನಿಯಮಾವಳಿಯ ಪ್ರಕಾರ ಕಾರ್ಯಕ್ರವನ್ನು ಮೂಡಲಗಿಯ ರುದ್ರಭೂಮಿಯಲ್ಲಿ ಪ್ರಥಮ ಬಾರಿಗೆ ಆಯೋಜಿಸಲಾಗಿದೆ ಎಂದು ಯುವ ಜೀವನ ಸೇವಾ ಸಂಸ್ಥೆಯ ಅಧ್ಯಕ್ಷ ಈರಪ್ಪ ಢವಳೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
