ಶಾಸಕ ರಮೇಶ ಜಾರಕಿಹೊಳಿ ಅವರಿಂದ ೫೦೦ ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಲೋಕಾರ್ಪಣೆ.!
ಗೋಕಾಕ: ಪ್ರಾಯೋಗಿಕವಾಗಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ತಾಲೂಕಾ ಆಸ್ಪತ್ರೆಯಲ್ಲಿ ಪಿ ಎಸ್ ಎ ತಂತ್ರಜ್ಞಾನವುಳ್ಳ ೫೦೦ ಎಲ್.ಪಿ.ಎಂ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕ ಪ್ರಾರಂಭಿಸಲಾಗಿದ್ದು, ಕೊರೋನಾ ಮೂರನೇ ಅಲೆ ಎದುರಿಸಲು ಈ ಆಕ್ಸಜನ ಪ್ಲಾಂಟ್ ತುಂಬಾ ಉಪಯುಕ್ತವಾಗಲಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ಸರಕಾರಿ ಆಸ್ಪತ್ರೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ೧.೫ ಕೋಟಿ ವೆಚ್ಚದಲ್ಲಿ ವಿ.ಎಸ್.ಎ ತಂತ್ರಜ್ಞಾನವುಳ್ಳ ೫೦೦ ಎಲ್.ಪಿ. ಎಮ್ ಸಾಮರ್ಥ್ಯದ ಆನ್ ಸೈಟ್ ಆಕ್ಸಿಜನ್ ಜನರೇಟರ್ ಯುನಿಟ್ ಘಟಕವನ್ನು ನಗರದ ಸರಕಾರಿ ಆಸ್ಪತ್ರೆಯಲ್ಲಿ ಸೋಮವಾರದಂದು ಅವರು ಲೋಕಾರ್ಪಣೆ ಮಾಡಿ, ಮಾತನಾಡಿದರು.
ಆಕ್ಸಜನ ಪ್ಲಾಂಟ್‌ನಿAದ ಕೋವಿಡ್ ಸೋಂಕಿತರಿಗಷ್ಟೇಯಲ್ಲದೇ ಇತರೆ ರೋಗಿಗಳಿಗೂ ಇದು ಅತ್ಯಂತ ಉಪಯುಕ್ತವಾಗಲಿದೆ. ಇಲ್ಲಿನ ವೈದ್ಯರು ಇದರ ಸದುಪಯೋಗ ಪಡೆದುಕೊಂಡು ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸುವ ಕಾರ್ಯ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ತಾಲೂಕು ಆರೋಗ್ಯಾಧಿಕಾರಿ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಡಿ.ವಾಯೋ.ಎಸ್.ಪಿ ಮನೋಜಕುಮಾರ ನಾಯ್ಕ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಡಾ.ಆರ್.ಎಸ್.ಬೆನಚಿನಮರಡಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ಡಾ.ಕೋಣಿ, ಡಾ. ಬಾಗಲಕೋಟೆ, ಡಾ.ಅಶೋಕ ಜಿರಗ್ಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.