Breaking News

2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ

Spread the love

2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ

ನವದೆಹಲಿ: ₹2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ಪಡೆಯುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಘೋಷಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ₹ 2 ಸಾವಿರದ ನೋಟು ವಿತರಣೆ ನಿಲ್ಲಿಸಲು ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.
ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್‌ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮೇ 23ರಿಂದ ನೋಟುಗಳನ್ನು ಬದಲಿಸಿಕೊಳ್ಳಬಹುದಾಗಿದೆ. ₹ 2 ಸಾವಿರ ಮುಖಬೆಲೆಯ ನೋಟುಗಳನ್ನು ಆರ್‌ಬಿಐ 2016ರ ನವೆಂಬರ್‌ನಲ್ಲಿ ಚಲಾವಣೆಗೆ ತಂದಿತ್ತು.

₹2,000 ನೋಟು ವಿನಿಮಯಕ್ಕೆ ಇರುವ ನಿಯಮಗಳು?

* ಸಾರ್ವಜನಿಕರು ಒಮ್ಮೆ ₹20,000 ಮೊತ್ತದ ನೋಟುಗಳನ್ನು ವಿನಿಯಮ ಮಾಡಿಕೊಳ್ಳಲು ಅವಕಾಶ ಇದೆ. ಅಂದರೆ ₹2,000 ಮುಖಬೆಲೆಯ 10 ನೋಟುಗಳನ್ನು ಮಾತ್ರ ಬದಲಾವಣೆ ಮಾಡಬಹುದು.

* ಬ್ಯಾಂಕ್ ಖಾತೆ ಹೊಂದಿಲ್ಲದಿದ್ದವರೂ ಕೂಡ ಯಾವುದೇ ಬ್ಯಾಂಕ್‌ನಲ್ಲಿ ಏಕಕಾಲದಲ್ಲಿ ₹2,000 ಮುಖಬೆಲೆಯ 10 ನೋಟುಗಳನ್ನು ವಿನಿಯಮ ಮಾಡಿಕೊಳ್ಳಬಹುದು.

* ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಲು ಯಾವುದೇ ಮಿತಿ ಇಲ್ಲ. ₹2,000 ಮುಖಬೆಲೆಯ ಎಷ್ಟು ನೋಟುಗಳನ್ನು ಬೇಕಾದರೂ ಅಕೌಂಟ್​ಗೆ ಡೆಪಾಸಿಟ್ ಮಾಡಬಹುದು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

11 − 4 =