Breaking News

ಹಾವೇರಿ ಅಕ್ಷರ ಜಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಧಿಕೃತ ಆಹ್ವಾನ

Spread the love

ಹಾವೇರಿ ಅಕ್ಷರ ಜಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಧಿಕೃತ ಆಹ್ವಾನ

ಯುವ ಭಾರತ ಸುದ್ದಿ ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ ೮೬ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ನುಡಿ ಜಾತ್ರೆಗೆ ಅಧಿಕೃತ ಆಹ್ವಾನ ನೀಡಿದರು.
ಅರ್ಥಪೂರ್ಣವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜರುಗಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದು ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತು ನೀಡಿದ ಆಮಂತ್ರಣವನ್ನು ಗೌರವ ಪೂರ್ವಕವಾಗಿ ಸ್ವೀಕರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಹಾವೇರಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡದ ಹಾಗೂ ಕನ್ನಡಿಗರ ಅಸ್ಮಿತೆಯ ಹಬ್ಬವಾಗಬೇಕು, ಅದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಸರಕಾರ ಅವಿರತವಾಗಿ ಕೆಲಸ ಮಾಡುತ್ತಿದೆ. ನಾಡಿನ ಎಲ್ಲಾ ಕನ್ನಡಿಗರು ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಂಗನ್ನು ಹೆಚ್ಚಿಸಬೇಕು ಎಂದು ಕರೆಕೊಟ್ಟರು.
ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ʻಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕʼವು ಕಾನೂನು ಆಗಿರುವುದಿಲ್ಲ. ಕಾರಣ ಅಧಿವೇಶನದಲ್ಲಿ ನಾಡಿನ ಇತರ ಸಮಸ್ಯೆಗಳ ಕುರಿತು ವಿಸ್ತ್ರತ ಚರ್ಚೆಗಳು ನಡೆದಿವೆ. ಪ್ರಸಕ್ತ ವಿಧೇಯಕದ ಕುರಿತು ನಿರೀಕ್ಷೆ ಮಟ್ಟದಲ್ಲಿ ಚರ್ಚೆಗೆ ಅವಕಾಶ ಸಿಕ್ಕಿಲ್ಲ. ಹಾಗಾಗಿ ಪರಿಷತ್ತು ಆಗ್ರಹಿಸಿದಂತೆ ಸುಗ್ರೀವಾಜ್ಞೆಯ ಮೂಲಕ ಈ ವಿಧೇಯಕ ಕಾನೂನು ಮಾಡಲು ಪ್ರಯತ್ನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಮಾತನಾಡಿ ನಾಡಿನ ಸಮಸ್ತ ಕನ್ನಡಿಗರು ಹಾವೇರಿಯಲ್ಲಿ ನಡೆಯುವ ಅಕ್ಷರ ಜಾತ್ರೆಗೆ ಆಗಮಿಸಬೇಕು. ಅದರಂತೆ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಹಿರಿಯ ಸಾಹಿತಿಗಳು, ಲೇಖಕರು, ಹೋರಾಟಗಾರರು, ಸಂಘಟಕರು, ಜನಪದ ಹಾಗೂ ಸಾಂಸ್ಕೃತಿಕ ಲೋಕದ ದಿಗ್ಗಜರು, ರಾಜಕಾರಣಿಗಳನ್ನು, ಜನಪ್ರತಿನಿಧಿಗಳನ್ನು, ಎಲ್ಲಾ ಸಮಾಜದ ಮುಖಂಡರನ್ನು ಗೌರವ ಪೂರ್ವಕವಾಗಿ ಆಹ್ವಾನ ನೀಡುತ್ತಿದೆ. ಹಾವೇರಿಯ ಸಮ್ಮೇಳನಕ್ಕೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಎಲ್ಲಾ ಸಿದ್ಧತೆಗಳು ಪೂರ್ಣವಾಗುತ್ತಿದ್ದು ಕನ್ನಡ ಸಾಹಿತ್ಯ ಪರಿಷತ್ತು, ರಾಜ್ಯ ಸರಕಾರ, ಸಮ್ಮೇಳನದ ಸ್ವಾಗತ ಸಮಿತಿ ಹಾಗೂ ಹಾವೇರಿ ಜಿಲ್ಲಾಡಳಿತ ಶರವೇಗದಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ತಿಳಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

one × one =