ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಶಪಡಿಸಿಕೊಂಡ ಅಧಿಕಾರಿಗಳು
ಯುವ ಭಾರತ ಸುದ್ದಿ ಗೋಕಾಕ :
ಗೋಕಾಕ ತಾಲೂಕಿನ ಕೊಣ್ಣೂರ ಚೆಕ್ ಪೋಸ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಗ್ಯಾರಂಟಿ ಕಾರ್ಡ್ ಗಳು ಗೋಕಾಕ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕಡಾಡಿ ಅವರಿಗೆ ಸೇರಿದ್ದಾಗಿವೆ. ಕ್ರೂಸರ್ ವಾಹನದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಗಳನ್ನು ಒಯ್ಯಲಾಗುತ್ತಿತ್ತು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಚುನಾವಣೆಗೆ ಸಂಬಂಧಿಸಿದ ಪ್ರಚಾರ ಸಾಮಗ್ರಿಗಳನ್ನು ಸಾಗಿಸುವಾಗ ಅವುಗಳಿಗೆ ಅನುಮತಿ ಅಗತ್ಯ. ಆದರೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅನುಮತಿ ಪಡೆದಿರಲಿಲ್ಲ. ಹೀಗಾಗಿ ಅಧಿಕಾರಿಗಳು ಕಾಂಗ್ರೆಸ್ಸಿನ ಗ್ಯಾರಂಟಿ ಕಾರ್ಡ್ ಗಳನ್ನು ವಶಪಡಿಸಿಕೊಂಡಿದ್ದಾರೆ.
YuvaBharataha Latest Kannada News