Breaking News

ರಾಷ್ಟ್ರಮಟ್ಟದ ಕಾನೂನು ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

ರಾಷ್ಟ್ರಮಟ್ಟದ ಕಾನೂನು ಸ್ಪರ್ಧೆಯಲ್ಲಿ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ ಬೆಳಗಾವಿ: ಹುಬ್ಬಳ್ಳಿಯ ಜಿ.ಕೆ.ಕಾನೂನು ಕಾಲೇಜು ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಧಾನ ಸ್ಪರ್ಧೆಯಲ್ಲಿ (National level Negotiation Competition) ಬೆಳಗಾವಿಯ ಕರ್ನಾಟಕ ಕಾನೂನು ಸಂಸ್ಥೆಯ ಆರ್‌.ಎಲ್‌. ಕಾನೂನು ಕಾಲೇಜಿನ ವಿದ್ಯಾರ್ಥಿ ಅವಧೂತ ಗೈಧೋಳೆ ಮತ್ತು ರವಿಚಂದ್ರಗೌಡ ಪಾಟೀಲ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದರು. ದೇಶದ ವಿವಿಧೆಡೆಯಿಂದ 24ಕ್ಕೂ ಹೆಚ್ಚು ತಂಡಗಳು ಭಾಗವಹಿಸಿದ್ದವು. ಆರ್.ಎಲ್.ಕಾನೂನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎಂ.ಆರ್.ಕುಲಕರ್ಣಿ, …

Read More »

ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ ವಡೇರಹಟ್ಟಿ ಗ್ರಾಮಕ್ಕೆ ವಾರ್ಗವಣೆ.!

ಭ್ರಷ್ಟ ಗ್ರಾಮ ಲೇಕ್ಕಾಧಿಕಾರಿ ಎಸ್ ಬಿ ಪಾಶ್ಚಾಪೂರ ವಡೇರಹಟ್ಟಿ ಗ್ರಾಮಕ್ಕೆ ವಾರ್ಗವಣೆ.! ಯುವ ಭಾರತ ವಿಶೇಷ ವರದಿ ಗೋಕಾಕ: ರಾಜಾಪೂರ ಗ್ರಾಮದಲ್ಲಿ ಕಳೆದ ಆರು ವರ್ಷಗಳಿಂದ ಗ್ರಾಮಲೇಕ್ಕಾಧಿಕಾರಿಯಾಗಿರುವ ಲಂಚಬಾಕ ತಲಾಟಿ ಎಸ್ ಬಿ ಪಾಶ್ಚಾಪೂರ ಬಗ್ಗೆ ಕಳೆದ ಜುಲೈ12ರಂದು “ಯುವ ಭಾರತ” ವಿಶೇಷ ವರದಿ ಪ್ರಕಟಿಸಿತ್ತು ಅದನ್ನು ಗಮನಿಸಿದ ಅಧಿಕಾರಿಗಳು ವಡೇರಹಟ್ಟಿ ಗ್ರಾಮಕ್ಕೆ ವರ್ಗಾವಣೆ ಮಾಡಿದ್ದಾರೆ. ಪ್ರತಿಯೊಂದು ಕಾಗದು ಪತ್ರಗಳ ವ್ಯವಹಾರಕ್ಕಾಗಿ ರಾಜಾಪೂರ ಗ್ರಾಮಸ್ಥರಿಂದ ಲಂಚ ಪಡೆಯುತ್ತ ಬಂದಿರುವ ಗ್ರಾಮ …

Read More »

ಗೋಕಾಕ ಪಾಲ್ಸ್..ಸೇಲ್ಪಿಗಳಿಗೆ ಬ್ರೇಕ್- ಡಿವೈಎಸ್‌ಪಿ, ಡಿ. ಎಸ್. ಮುಲ್ಲಾ!

ಗೋಕಾಕ ಪಾಲ್ಸ್..ಸೇಲ್ಪಿಗಳಿಗೆ ಬ್ರೇಕ್- ಡಿವೈಎಸ್‌ಪಿ, ಡಿ. ಎಸ್. ಮುಲ್ಲಾ! ಗೋಕಾಕ: ಡಿವೈಎಸ್‌ಪಿ ಡಿ ಎಸ್ ಮುಲ್ಲಾ ನೇತ್ರತ್ವದಲ್ಲಿ ಬ್ಯಾರಿಕೇಡ ಅಳವಡಿಸುತ್ತಿರುವದು. ಯುವ ಭಾರತ ಸುದ್ದಿ ಗೋಕಾಕ: ಕಳೆದ ಹಲವು ದಿನಗಳಿಂದ ಗೋಕಾಕ ಜಲಪಾತದಲ್ಲಿ ಪ್ರವಾಸಿಗರು ಜಲಪಾತದ ತುತ್ತ ತುದಿಗೆ ತೆರಳಿ ಸೇಲ್ಪಿ ತೆಗೆದುಕೊಳ್ಳುತ್ತಿರುವ ಹಿನ್ನಲೆ ಸ್ಥಳೀಯ ಪೋಲಿಸ್ ಇಲಾಖೆ ಸೂಕ್ತಕ್ರಮವಹಿಸಿ ಮಹಾಲಿಂಗೇಶ್ವರ ದೇವಸ್ಥಾನದ ಮುಂದೆ ಬ್ಯಾರಿಕೇಡ ಅಳವಢಿಸಿ ಪ್ರವಾಸಿಗರು ಜಲಪಾತದತ್ತ ತೆರಳದಂತೆ ನಿರ್ಬಂಧ ವಿಧಿಸಿದ್ದಾರೆ. ಪಶ್ಚಿಮ ಘಟ್ಟ ಅರಣ್ಯ ಪ್ರದೇಶಗಳಲ್ಲಿ …

Read More »

ಬೆಳಗಾವಿ; ಜೈನ ಮುನಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ

ಬೆಳಗಾವಿ; ಜೈನ ಮುನಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ಬೆಂಗಳೂರು : ಕರ್ನಾಟಕದಲ್ಲಿ ಜೈನ ಮುನಿ ಕಾಮಕುಮಾರ ನಂದಿಮಹಾರಾಜ ಭೀಕರ ಹತ್ಯೆ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಈ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಘೋಷಣೆ ಮಾಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಈ ಕುರಿತು ಘೋಷಣೆ ಮಾಡಿದರು. ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದರು. ಬೆಳಗಾವಿ …

Read More »

ಬಿಜೆಪಿಯ 10 ಶಾಸಕರ ಅಮಾನತು

ಬಿಜೆಪಿಯ 10 ಶಾಸಕರ ಅಮಾನತು ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್​ ಯು.ಟಿ. ಖಾದರ್​ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ ಹಾಗೂ ಸುನಿಲಕುಮಾರ …

Read More »

ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ತಮಿಳುನಾಡಿನಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು. ಇದೀಗ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಇತ್ತೀಚಿನ …

Read More »

ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ

ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ …

Read More »

ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರಕಾರದ ಮೇಲೆ ಒತ್ತಡ ಹೇರಿದ ಶಾಸಕ ವಿಠ್ಠಲ ಹಲಗೇಕರ

ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರಕಾರದ ಮೇಲೆ ಒತ್ತಡ ಹೇರಿದ ಶಾಸಕ ವಿಠ್ಠಲ ಹಲಗೇಕರ ಬೆಳಗಾವಿ : ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ಸೋಮವಾರ ವಿಧಾನಸಭೆಯಲ್ಲಿ ಖಾನಾಪುರ ತಾಲೂಕಿನ ಜನತೆ ಎದುರಿಸುತ್ತಿರುವ ಸಮಗ್ರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿ ಗಮನ ಸೆಳೆದರು. ಮೊದಲಿಗೆ ಅವರು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಬ್ರಿಟಿಷರು ಗಲ್ಲು ಶಿಕ್ಷೆ ವಿಧಿಸಿದ ನಂದಗಡ ವೀರಭೂಮಿಯನ್ನು ರಾಜ್ಯ ಸರಕಾರ ಈ ಕೂಡಲೇ ಅಭಿವೃದ್ಧಿಗೊಳಿಸುವಂತೆ …

Read More »

ಗೃಹ ಜ್ಯೋತಿ, ಗೃಹ ಲಕ್ಷ್ಮೀ ನಕಲಿ ಆಪ್ ಗಳ ಹಾವಳಿ

ಗೃಹ ಜ್ಯೋತಿ, ಗೃಹ ಲಕ್ಷ್ಮೀ ನಕಲಿ ಆಪ್ ಗಳ ಹಾವಳಿ ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮೀ, ಮತ್ತು ಗೃಹ ಜ್ಯೋತಿ ಯೋಜನೆಗಳ ಹೆಸರಲ್ಲಿ ನಕಲಿ ಆಪ್ ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ. ಈ ಯೋಜನೆಗಳ ಬಗ್ಗೆ ಪ್ಲೇ ಸ್ಟೋರ್ ಮತ್ತು ಇತರ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಆಪ್ ಗಳು ಕಾರ್ಯ ನಿರ್ವಹಿಸುತ್ತವೆ. ಅವುಗಳನ್ನು ಬಳಸಿದರೆ ಜನರ ವೈಯಕ್ತಿಕ ಮಾಹಿತಿ ಕಲೆ ಹಾಕಿ ಅದನ್ನು ದುರ್ಬಳಕೆ …

Read More »

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ ಬೆಂಗಳೂರು : ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ಮುಖಂಡರ ನಿಯೋಗವು ಇಂದು ಅವರನ್ನು …

Read More »