Breaking News

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌ ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ. ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ ನಂತರ …

Read More »

2.14 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್‌ ಲಾಭ : ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ

2.14 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್‌ ಲಾಭ : ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ವಿಧಾನಸಭೆ ಚುನಾವಣೆ ವೇಳೆ ಭರವಸೆ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜುಲೈ 1ರಂದು ಜಾರಿ ಮಾಡುವುದಾಗಿ ಈಗಾಗಲೇ ಪ್ರಕಟಿಸಿದೆ. ಗೃಹಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್​ ಗೊಂದಲಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ …

Read More »

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ ನೇಮಕ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ ನೇಮಕ ಬೆಳಗಾವಿ : ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಬೆಳಗಾವಿ ಮಹಾನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಸೋಮಶೇಖರ ಹಿಟ್ಟಣಗಿ ಅವರನ್ನು ನೇಮಕ ಮಾಡಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದಾರೆ.

Read More »

ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚಿಸಿ ಲೋಪದೋಷ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚಿಸಿ ಲೋಪದೋಷ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ವಿಚಾರವಾಗಿ ಉಂಟಾಗಿದ್ದ ಗೊಂದಲ ಬಗೆಹರಿಸುವಂತೆ ಬರಗೂರು ರಾಮಚಂದ್ರಪ್ಪ ‌ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ …

Read More »

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್

ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್ ಬೆಂಗಳೂರು: ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಈಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು ₹59,000 ಕೋಟಿ ವಾರ್ಷಿಕ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಅವರು ತಿಳಿಸಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ …

Read More »

ಅತಿವೃಷ್ಟಿ-ಬರಗಾಲ ನಿರ್ವಹಣೆ- ಪೂರ್ವಸಿದ್ಧತಾ ಸಭೆ : ಬಿತ್ತನೆ ಬೀಜ ದರ, ದಾಸ್ತಾನು ಮಾಹಿತಿ ಪ್ರದರ್ಶಿಸಲು ಡಿಸಿ ಸೂಚನೆ

ಅತಿವೃಷ್ಟಿ-ಬರಗಾಲ ನಿರ್ವಹಣೆ- ಪೂರ್ವಸಿದ್ಧತಾ ಸಭೆ : ಬಿತ್ತನೆ ಬೀಜ ದರ, ದಾಸ್ತಾನು ಮಾಹಿತಿ ಪ್ರದರ್ಶಿಸಲು ಡಿಸಿ ಸೂಚನೆ ಬೆಳಗಾವಿ : ಜಿಲ್ಲೆಯಲ್ಲಿ ಬೀಜ ವಿತರಣಾ ಕಾರ್ಯವನ್ನು ಆರಂಭಿಸಲಾಗಿದ್ದು, ಆಯಾ ವಿತರಣಾ ಕೇಂದ್ರಗಳಲ್ಲಿ ಬೀಜ ಲಭ್ಯತೆ, ದರ ಹಾಗೂ ದಾಸ್ತಾನು ಕುರಿತು ಸ್ಪಷ್ಟ ಮಾಹಿತಿಯನ್ನು ಬೀಜ ವಿತರಣಾ ಕೇಂದ್ರದ ಆವರಣದಲ್ಲಿ ಕಡ್ಡಾಯವಾಗಿ ದೊಡ್ಡದಾದ ಫ್ಲೆಕ್ಸ್ ಮೂಲಕ ಪ್ರದರ್ಶಿಸಬೇಕು ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅತಿವೃಷ್ಟಿ, ಪ್ರವಾಹ ಹಾಗೂ ಬರಗಾಲ ನಿರ್ವಹಣೆಗೆ …

Read More »

ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ

ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ ಬೆಂಗಳೂರು : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ. ‘ಗೃಹ ಲಕ್ಷ್ಮಿ’ಯ ಇತರ ನಿಯಮಗಳು ಹೀಗಿವೆ: ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಲ್‌ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ …

Read More »

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ

ಮೇಲ್ಮನೆ ಚುನಾವಣೆಗೆ ದಿನಾಂಕ ಘೋಷಣೆ ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಸದಸ್ಯರ ರಾಜೀನಾಮೆಯಿಂದ ತೆರವಾಗಿರುವ ಮೂರು ಸ್ಥಾನಗಳ ಆಯ್ಕೆಗೆ, ಚುನಾವಣಾ ಆಯೋಗವು ಉಪ ಚುನಾವಣೆ ದಿನಾಂಕ ಪ್ರಕಟಿಸಿದೆ. ಬಾಬೂರಾವ್ ಚಿಂಚನಸೂರ, ಆರ್.ಶಂಕರ್‌ ಹಾಗೂ ಲಕ್ಷ್ಮಣ ಸವದಿ ಅವರು ಈ ಬಾರಿಯ ವಿಧಾನಸಭೆ ಚುನಾವಣೆಗೂ ಮುನ್ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪರಿಷತ್‌ ಸದಸ್ಯರನ್ನು ವಿಧಾನಸಭೆ ಸದಸ್ಯರೇ ಮತದಾನದ ಮೂಲಕ ಆಯ್ಕೆ ಮಾಡಲಿದ್ದಾರೆ. ಚಿಂಚನಸೂರ …

Read More »

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.!

ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ- ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ.! ಗೋಕಾಕ: ಅತಿ ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗಾಗಿ ಸಮಾಜ ಭಾಂಧವರು ಸಂಘಟಿತರಾಗಿ ಹೋರಾಟ ಮಾಡುವ ಅವಶ್ಯ ಎಂದು ಹೊಸದುರ್ಗ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ. ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿ ಹೇಳಿದರು. ಅವರು, ಮಂಗಳವಾರದAದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಉಪ್ಪಾರ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿ, ಉಪ್ಪಾರ ಸಮಾಜವು ಶೈಕ್ಷಣಿಕ, ಸಮಾಜಿಕ, …

Read More »

ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಬುಧವಾರ ಆರಂಭ

ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಬುಧವಾರ ಆರಂಭ ಬೆಳಗಾವಿ : ವಡಗಾವಿ ಯಳ್ಳೂರ ರಸ್ತೆಯ ಅನ್ನಪೂರ್ಣೇಶ್ವರಿ ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ದಶಮಾನೋತ್ಸವ ಜೂನ್ 7 ರಿಂದ 9 ರವರೆಗೆ ನಡೆಯಲಿದೆ. ವರ್ಷಾವಧಿ ಉತ್ಸವ ಉಡುಪಿ ಜಿಲ್ಲೆ ಉಚ್ಚಿಲದ ವಿಶ್ವನಾಥ ಜೋಯಿಸರ ನೇತೃತ್ವದಲ್ಲಿ ದಶಮಾನೋತ್ಸವವಾಗಿ ಈ ವರ್ಷ ವಿಶೇಷವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜೂನ್ 7 ರಂದು ಬೆಳಿಗ್ಗೆ 5 ಕ್ಕೆ …

Read More »